ದೇಹವನ್ನು ಹೈಡ್ರೇಟ್ ಆಗಿಡುತ್ತದೆ 
ಫೋಟೋ ಗ್ಯಾಲರಿ

ಹೊಳೆಯುವ ಚರ್ಮ ಮತ್ತು ಉತ್ತಮ ಜೀರ್ಣಕ್ರಿಯೆಗೆ ಖರ್ಬೂಜ ಸೂಪರ್‌!

ಮಣಿಕಂಠ ಪಾ ಹಿರೇಮಠ

ದೇಹವನ್ನು ಹೈಡ್ರೇಟ್ ಆಗಿಡುತ್ತದೆ

ಖರ್ಬೂಜ ಹಣ್ಣಿನಲ್ಲಿ ನೀರಿನ ಪ್ರಮಾಣ ಅತ್ಯಧಿಕವಾಗಿರುತ್ತದೆ. ಇದು ಬೇಸಿಗೆಯ ಬಿಸಿಲಿನಲ್ಲಿ ದೇಹ ನಿರ್ಜಲೀಕರಣಗೊಳ್ಳದಂತೆ ತಡೆಯುತ್ತದೆ. ಜೊತೆಗೆ ಇದರಲ್ಲಿರುವ ನೈಸರ್ಗಿಕ ಎಲೆಕ್ಟ್ರೋಲೈಟ್‌ಗಳು ದೇಹದಲ್ಲಿ ಶಕ್ತಿಯನ್ನು ಸಮತೋಲನದಲ್ಲಿಡುತ್ತವೆ.

ರೋಗನಿರೋಧಕ ಶಕ್ತಿ ಹೆಚ್ಚಳ

ಈ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ. ಇವು ದೇಹದಲ್ಲಿ ಬಿಳಿ ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ಸೋಂಕುಗಳ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿಯನ್ನು ಗಣನೀಯವಾಗಿ ಹೆಚ್ಚಿಸುತ್ತವೆ.

ಕಣ್ಣಿನ ಆರೋಗ್ಯಕ್ಕೆ ಬೆಸ್ಟ್

ಖರ್ಬೂಜ ಹಣ್ಣಿನಲ್ಲಿ ಬೀಟಾ-ಕ್ಯಾರೋಟಿನ್ ಹೆಚ್ಚಾಗಿರುತ್ತದೆ, ಇದು ದೇಹ ಸೇರಿದಾಗ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ. ಇದು ಕಣ್ಣಿನ ದೃಷ್ಟಿ ದೋಷಗಳನ್ನು ನಿವಾರಿಸಲು ಮತ್ತು ವಯಸ್ಸಾಗುವಿಕೆಯಿಂದ ಬರುವ ಕಣ್ಣಿನ ಪೊರೆ ಸಮಸ್ಯೆಯನ್ನು ತಡೆಯಲು ಸಹಾಯ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಣ

ಖರ್ಬೂಜ ಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ರಕ್ತನಾಳಗಳನ್ನು ಸಡಿಲಗೊಳಿಸಿ, ದೇಹದಲ್ಲಿ ರಕ್ತ ಪರಿಚಲನೆ ಸುಗಮವಾಗುವಂತೆ ನೋಡಿಕೊಳ್ಳುತ್ತದೆ. ಪರಿಣಾಮವಾಗಿ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ ಮತ್ತು ಹೃದಯದ ಆರೋಗ್ಯ ಸುಧಾರಿಸುತ್ತದೆ.

ತೂಕ ಇಳಿಕೆ ಮತ್ತು ಜೀರ್ಣಕ್ರಿಯೆಗೆ ಸಹಕಾರಿ

ಇದರಲ್ಲಿ ಕ್ಯಾಲೊರಿಗಳು ಅತ್ಯಂತ ಕಡಿಮೆ ಇರುತ್ತವೆ ಮತ್ತು ನಾರು ಅಧಿಕವಾಗಿರುತ್ತದೆ. ನಾರಿನಂಶವು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಿ ಮಲಬದ್ಧತೆಯನ್ನು ದೂರ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಅತ್ಯುತ್ತಮ ಹಣ್ಣಾಗಿದೆ, ಏಕೆಂದರೆ ಇದು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.