ಸಾಂದರ್ಭಿಕ ಚಿತ್ರ 
ಆರೋಗ್ಯ

ಖಾಲಿ ಹೊಟ್ಟೆಯಲ್ಲಿ ಲವಂಗದ ನೀರು ಕುಡಿಯಿರಿ: ಈ ಅದ್ಭುತ ಪ್ರಯೋಜನಗಳು ನಿಮ್ಮನ್ನು ಬೆಚ್ಚಿಬೀಳಿಸುತ್ತವೆ! Clove water

Clove water: ನಮ್ಮ ಅಡುಗೆಮನೆಯ ಮಸಾಲೆ ಪದಾರ್ಥಗಳಲ್ಲಿ ಒಂದಾದ ಲವಂಗವು ಕೇವಲ ರುಚಿಗೆ ಮಾತ್ರವಲ್ಲದೆ, ಅದ್ಭುತ ಔಷಧೀಯ ಗುಣಗಳಿಗೂ ಹೆಸರುವಾಸಿಯಾಗಿದೆ. ಪ್ರತಿದಿನ ಬೆಳಿಗ್ಗೆ ಲವಂಗದ ನೀರನ್ನು ಕುಡಿಯುವುದರಿಂದ ಇದು ದೇಹದ ಆರೋಗ್ಯವನ್ನು ಕಾಪಾಡುವುದಲ್ಲದೇ, ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಆ ಪ್ರಯೋಜನಗಳು ಯಾವುದು ಎಂದು ನೋಡೋಣ ಬನ್ನಿ...

ಲವಂಗದ ನೀರನ್ನು ಹೇಗೆ ತಯಾರಿಸುವುದು?

ಎರಡು ಲವಂಗವನ್ನು ಒಂದು ಲೋಟ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ನಂತರ ಬೆಳಿಗ್ಗೆ ಆ ನೀರನ್ನು ಸ್ವಲ್ಪ ಬಿಸಿ ಮಾಡಿ ಖಾಲಿ ಹೊಟ್ಟೆಯಲ್ಲಿ ಸೇವಿಸಿರಿ. ಈ ವಿಧಾನವನ್ನು ಅನುಸರಿಸುವುದರಿಂದ ಆರೋಗ್ಯದ ಸಮಸ್ಯೆಗಳು ಸುಧಾರಿಸುತ್ತವೆ.

ಲವಂಗ ನೀರಿನ ಪ್ರಯೋಜನಗಳೇನು?

ಜೀರ್ಣಕ್ರಿಯೆ ಸುಧಾರಣೆ

ಲವಂಗ ನೀರು ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಏಕೆಂದರೆ ಇದರಲ್ಲಿ ಯುಜೆನಾಲ್ ಸಂಯುಕ್ತವಿದ್ದು, ಇದು ಜೀರ್ಣಕ್ರಿಯಾ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದರಿಂದ ಆಹಾರವು ಸುಲಭವಾಗಿ ಜೀರ್ಣವಾಗುವುದರ ಜೊತೆಗೆ  ಗ್ಯಾಸ್, ಹೊಟ್ಟೆ ಉಬ್ಬರ, ಅಜೀರ್ಣ ಮತ್ತು ಬ್ಲೋಟಿಂಗ್ ಕಡಿಮೆಯಾಗುತ್ತದೆ. ಇದು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಹೊಟ್ಟೆಯ ಆರೋಗ್ಯವನ್ನು ಬಲಪಡಿಸುತ್ತದೆ. 

ತೂಕ ಇಳಿಕೆಗೆ ಸಹಕಾರಿ

ಲವಂಗ ನೀರು ತೂಕ ಇಳಿಕೆಗೆ ಸಹಕಾರಿ ಆಗಿದೆ. ಇದು ಚಯಾಪಚಯ ಕ್ರಿಯೆಗೆ ಉತ್ತೇಜನ ನೀಡುವುದು ಮತ್ತು ರಕ್ತದ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ. ಇದು ಹಸಿವನ್ನು ಕಡಿಮೆ ಮಾಡಿ. ಕೊಬ್ಬು ಸಂಗ್ರಹಣೆ ಕಡಿಮೆಗೊಳಿಸಿ, ತೂಕ ಇಳಿಸಿಕೊಳ್ಳುವಂತೆ ಸಹಾಯ ಮಾಡುತ್ತದೆ. 

ರೋಗನಿರೋಧಕ ಶಕ್ತಿ

ಲವಂಗ ನೀರಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಇದು ಉರಿಯೂತವನ್ನು ಕಡಿಮೆ ಮಾಡಿ, ಬ್ಯಾಕ್ಟೀರಿಯಾ, ವೈರಸ್‌ಗಳ ವಿರುದ್ಧ ಹೋರಾಡುವಂತೆ ಮಾಡುತ್ತದೆ. ಜೊತೆಗೆ ಬಿಳಿ ರಕ್ತ ಕಣಗಳನ್ನು ಹೆಚ್ಚಿಸಿ, ಸೋಂಕುಗಳಿಂದ ರಕ್ಷಣೆ ನೀಡುತ್ತದೆ. ಅಧ್ಯಯನಗಳ ಪ್ರಕಾರ ಲವಂಗ ಉರಿಯೂತ ನಿವಾರಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳಿಂದ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುತ್ತದೆ

ಬಾಯಿಯ ಆರೋಗ್ಯ ಕಾಪಾಡುತ್ತದೆ

ಲವಂಗ ನೀರಿನಲ್ಲಿ  ಯುಜೆನಾಲ್ ಸಂಯುಕ್ತವಿರುವುದರಿಂದ ಇದು ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಸ್ಥಳೀಯ ನಿಶ್ಚಲಕಾರಿ ಗುಣಗಳನ್ನು ಹೊಂದಿದೆ. ಆದರಿಂದ ಇದರ ನಿಯಮಿತ ಸೇವನೆಯು ಬಾಯಿಯ ದುರ್ವಾಸನೆ ನಿವಾರಿಸಿ, ಹಲ್ಲುನೋವು ಮತ್ತು ಒಸಡುಗಳ ಉರಿಯೂತವನ್ನು ಕಡಿಮೆ ಮಾಡುತ್ತದೆ. ಬಾಯಿ ಮುಕ್ಕಳಿಸುವುದರಿಂದ ಸೂಕ್ಷ್ಮಾಣುಗಳನ್ನು ಕೊಲ್ಲುತ್ತದೆ, ಹುಣ್ಣುಗಳು ಮತ್ತು ಗಮ್ ಸಮಸ್ಯೆಗಳನ್ನು ತಗ್ಗಿಸುತ್ತದೆ (ಏಜೆನ್ಸೀಸ್​).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.