ಮಳೆಗಾಲ ಬಂತೆಂದರೆ ಸಾಕು ಕೆಮ್ಮು, ಶೀತ, ಜ್ವರ ಸಾಮಾನ್ಯವಾಗಿರುತ್ತದೆ. ಇದು ದುರ್ಬಲಗೊಂಡ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸೂಚಿಸುತ್ತವೆ. ಮಾನ್ಸೂನ್ ಸಮಯದಲ್ಲಿ ರೋಗಗಳ ಹರಡುವಿಕೆ, ಕಳಪೆ ನೈರ್ಮಲ್ಯ, ಕಲುಷಿತ ಆಹಾರ ಮತ್ತು ನೀರಿನ ಸೇವನೆಯು ದೇಹದ ರಕ್ಷಣೆಯನ್ನು ದುರ್ಬಲಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ತಿಳಿಸಿದೆ. ಉತ್ತಮ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳುವುದು ಆರೋಗ್ಯಕರ ಜೀವನಕ್ಕೆ ಅವಶ್ಯಕವಾಗಿದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವುದರಿಂದ ಸೋಂಕನ್ನು ತಡೆಗಟ್ಟಬಹುದು. ಮಳೆಗಾಲದಲ್ಲಿ ಆರೋಗ್ಯವಾಗಿರಲು ದಿನನಿತ್ಯ ನಾವು ಬಳಸುವ ಆಹಾರದಲ್ಲಿ ಕೆಲವೊಂದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಪಾದರ್ಥಗಳನ್ನು ಸೇರಿಸಬೇಕು. ಅವುಗಳು ಹೀಗಿವೆ.
- ವಿಟಮಿನ್ ಸಿ: ರೋಗನಿರೋಧಕ ಶಕ್ತಿಗಾಗಿ ವಿಟಮಿನ್ ಸಿ ಸಮೃದ್ಧವಾಗಿರುವ ಸಿಟ್ರಸ್ ಹಣ್ಣುಗಳಾದ ದ್ರಾಕ್ಷಿ, ನಿಂಬೆಹಣ್ಣು ಮತ್ತು ಕಿತ್ತಳೆಯನ್ನು ಹೆಚ್ಚಾಗಿ ಬಳಸಿ. ಇದು ಬಿಳಿ ರಕ್ತ ಕಣಗಳ ಉತ್ಪಾದನೆಗೆ ಪ್ರಮುಖ ಪೋಷಕಾಂಶವಾಗಿದೆ. ಸೋಂಕುಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ.
- ಬೆಳ್ಳುಳ್ಳಿ ಬಳಕೆ: ಬೆಳ್ಳುಳ್ಳಿಯಲ್ಲಿ ಅಲಿಸಿನ್ ಅಂಶ ಇದೆ. ಇದು ಪ್ರಬಲವಾದ ಬ್ಯಾಕ್ಟೀರಿಯಾ ಮತ್ತು ಆಂಟಿವೈರಲ್ ಗುಣಲಕ್ಷಣಗಳೊಂದಿಗೆ ಸಂಯುಕ್ತವಾಗಿದೆ. ಊಟದಲ್ಲಿ ಬೆಳ್ಳುಳ್ಳಿ ಬಳಸುವುದರಿಂದ ರೋಗನಿರೋಧಕ ಪ್ರತಿಕ್ರಿಯೆಯನ್ನು ಬಲಪಡಿಸಲು ಮತ್ತು ಮಾನ್ಸೂನ್ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
- ಶುಂಠಿ: ಶುಂಠಿಯು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಅತ್ಯುತ್ತಮವಾಗಿದೆ.
- ಸೊಪ್ಪು ಮತ್ತು ತರಕಾರಿ: ಮೆಂತ್ಯಸೊಪ್ಪು, ಎಲೆಕೋಸು ಮತ್ತು ಪಾಲಕ್ ವಿಟಮಿನ್ ಎ, ಸಿ ಮತ್ತು ಇ, ಕಬ್ಬಿಣಾಂಶವನ್ನು ಹೊಂದಿರುತ್ತದೆ. ಇದು ದೇಹಕ್ಕೆ ಅವಶ್ಯಕವಾಗ ಪೋಷಕಾಂಶ ನೀಡುತ್ತದೆ. ಮತ್ತು ದೇಹದಲ್ಲಿನ ಮೂಳೆಗಳು ಗಟ್ಟಿಯಾಗಲು ಸಹಾಯ ಮಾಡುತ್ತದೆ.
- ಅರಿಶಿನ: ಅರಿಶಿನವು ಕರ್ಕ್ಯುಮಿನ್ ಅನ್ನು ಹೊಂದಿರುತ್ತದೆ. ಇದು ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.
- ಮೊಸರು: ಮೊಸರಿನಲ್ಲಿ ಪ್ರೋಬಯಾಟಿಕ್ ಸಮೃದ್ಧವಾಗಿದೆ. ನಿಯಮಿತವಾಗಿ ಮೊಸರು ಸೇವಿಸುವುದರಿಂದ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಮ್ಮ ದೇಹದ ರಕ್ಷಣಾ ಕಾರ್ಯವಿಧಾನಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ.