ಬೆಳಗ್ಗೆ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಅದು ದೇಹದ ಒಳಗಿನ ಕ್ರಿಯೆಗಳನ್ನು ನಮಗೆ ತಿಳಿಯದಂತೆ ಗುಣಪಡಿಸುತ್ತದೆ. ಚಯಾಪಚಯ ಕ್ರಿಯೆ ಹೆಚ್ಚಿಸುತ್ತದೆ, ಜೀರ್ಣಶಕ್ತಿಯನ್ನು ಬಲಗೊಳಿಸುತ್ತದೆ. ಬೆಚ್ಚಗಿನ ನೀರು ಕರುಳನ್ನು ಬಿಗಿಗೊಳಿಸುತ್ತದೆ ಮತ್ತು ಚಯಾಪಚಯ ಕ್ರಿಯೆಯು ದೇಹದಲ್ಲಿರುವ ತ್ಯಾಜ್ಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಬಹಿರಂಗಪಡಿಸಿವೆ.
ಬಿಸಿ ನೀರು ಕುಡಿಯುವುದರಿಂದ ನಿಮಗಿರುವ ಮೈಗ್ರೇನ್ ಮತ್ತು ಇತರೆ ರೀತಿಯ ತಲೆನೋವು, ಮುಟ್ಟಿನ ಸಮಯದಲ್ಲಿ ಆಗುವಂತಹ ನೋವುಗಳಿಂದ ತಕ್ಷಣ ಪರಿಹಾರ ಸಿಗುತ್ತದೆ. ಬಿಸಿ ನೀರು ಚರ್ಮಕ್ಕೆ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ನಿಮ್ಮ ದೇಹದ ಚರ್ಮವನ್ನು ಕಾಂತಿಯುತವಾಗಿ ಕಾಣಲು ಸಹಾಯ ಮಾಡುತ್ತದೆ.
ಬಿಸಿ ನೀರನ್ನು ಕುಡಿಯುವುದರಿಂದ ಚರ್ಮದಲ್ಲಿರುವ ಜೀವಕೋಶಗಳನ್ನು ಸರಿಪಡಿಸುವ ಮೂಲಕ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಚರ್ಮದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವಾಗುವಂತೆ, ಬಿಸಿ ನೀರನ್ನು ನಿಂಬೆಯ ಹುಳಿಯೊಂದಿಗೆ ಮಿಶ್ರಣ ಮಾಡಿ ಕುಡಿಯಿರಿ, ಏಕೆಂದರೆ ಇದು ದೇಹದ ಪಿಎಚ್ ಸಮತೋಲನ ರಕ್ಷಿಸುತ್ತದೆ. ಮೊಡವೆಗಳು, ಸುಕ್ಕುಗಳು ಮತ್ತು ಕಪ್ಪು ಕಲೆಗಳಿಂದ ನಿಮ್ಮ ಮುಖವನ್ನು ದೂರವಿಡಬಹುದು.
ಬಿಸಿ ನೀರನ್ನು ನೀವು ದೀರ್ಘಕಾಲದವರೆಗೆ ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡರೆ ಮಲಬದ್ಧತೆಗೆ ಸಹ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರನ್ನು ಕುಡಿಯುವುದರಿಂದ ಕರುಳಿನ ಚಲನೆ ಉತ್ತಮಗೊಳ್ಳುವುದು. ಹೊಟ್ಟೆ ನೋವು ನಿವಾರಣೆಗೂ ಇದು ಉತ್ತಮವಾಗಿ ಕೆಲಸ ಮಾಡುತ್ತದೆ.
ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ನಿಮ್ಮ ದೇಹದ ತಾಪಮಾನ ಹೆಚ್ಚಾಗುತ್ತದೆ ಮತ್ತು ನಿಮ್ಮ ದೇಹದಲ್ಲಿ ಬೆವರು ಬರಲು ಪ್ರಾರಂಭವಾಗುತ್ತದೆ.
ಈ ಸಂದರ್ಭದಲ್ಲಿ ನಿಮ್ಮ ದೇಹದಿಂದ ವಿಷಕಾರಿ ಅಂಶಗಳು ಮತ್ತು ಕಲುಷಿತ ಬೇಡದ ತ್ಯಾಜ್ಯಗಳು ಹೊರಹೋಗುತ್ತವೆ. ಇದರಿಂದ ನಿಮ್ಮ ಚರ್ಮದ ಮೇಲೆ ಮೊಡವೆಗಳು ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚುತ್ತದೆ ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮವಾಗಿ ಕಾಪಾಡುವುದು ಮಾತ್ರವಲ್ಲದೆ ಹೊಳಪಿನಿಂದ ಹಾಗೂ ಕಾಂತಿಯಿಂದ ಕೂಡಿದ ಚರ್ಮ ನಿಮ್ಮದಾಗುವ ಹಾಗೆ ಮಾಡುತ್ತದೆ.
ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನ ಜೊತೆಗೆ ಸ್ವಲ್ಪ ನಿಂಬೆಹಣ್ಣಿನ ರಸ ಮತ್ತು ಕೆಲವು ಹನಿಗಳಷ್ಟು ಜೇನುತುಪ್ಪ ಹಾಕಿ ಕುಡಿದರೆ ತುಂಬಾ ಒಳ್ಳೆಯದು.