Diabetes: ತೆಂಗಿನ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತೆಂಗಿನ ನೀರಿನಲ್ಲಿರುವ ಹೈಡ್ರೇಟಿಂಗ್ ಗುಣಗಳು ಮತ್ತು ಪೋಷಕಾಂಶಗಳು ನಮ್ಮ ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ಒದಗಿಸುತ್ತವೆ. ಇನ್ನು ಮಧುಮೇಹ ಇರುವಂತವರು ತೆಂಗಿನ ನೀರು ಕುಡಿಯಬಹುದೇ ಎಂಬುದು ಹಲವಾರು ಜನರಲ್ಲಿ ಕಾಡುವಂತಹ ಪ್ರಶ್ನೆಯಾಗಿದೆ. ಇನ್ನು ಇದನ್ನು ಸೇವಿಸುವುದರಿಂದ ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತಿದಿಯೇ ಎಂಬುದನ್ನು ತಿಳಿಯಲು ಈ ಲೇಖನ ಓದಿ...
ತೆಂಗಿನ ನೀರಿನಲ್ಲಿ ಕ್ಯಾಲೋರಿಗಳು ಕಡಿಮೆ ಇರುತ್ತದೆ. ಈ ನೀರಿನಲ್ಲಿ ನೈಸರ್ಗಿಕ ಸಕ್ಕರೆಗಳು, ಎಲೆಕ್ಟ್ರೋಲೈಟ್‌ಗಳು ಮತ್ತು ಖನಿಜಗಳಿವೆ. ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್ನಂತಹ ವಿಟಮಿನ್ ಸಿ ಒದಗಿಸುತ್ತದೆ. ಈ ಪೋಷಕಾಂಶಗಳು ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಧುಮೇಹವಿಲ್ಲದವರಿಗೆ ಈ ತೆಂಗಿನ ನೀರು ಪೌಷ್ಟಿಕವಾಗಿದ್ದರೆ, ಮಧುಮೇಹಿಗಳು ತೆಂಗಿನ ನೀರಿನ ಬಗ್ಗೆ ಜಾಗರೂಕರಾಗಿರಬೇಕು.
ಮಧುಮೇಹಿಗಳು ತೆಂಗಿನ ನೀರನ್ನು ಸೇವಿಸುವುದರಿಂದ ಇದರಲ್ಲಿರುವ ಸಕ್ಕರೆ ಅಂಶ ನಿಮ್ಮ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಧಾನವಾಗಿ ಹೆಚ್ಚಿಸುತ್ತದೆ. ತೆಂಗಿನ ನೀರು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಹೊಂದಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಧಾನವಾಗಿ ಹೆಚ್ಚಿಸುತ್ತದೆ. ಗ್ಲೂಕೋಸ್ ಮಟ್ಟದಲ್ಲಿ ಏರಿಕೆಯಾಗುವುದರಿಂದ ಸೇವಿಸುವಾಗ ಎಚ್ಚರಿಕೆ ವಹಿಸಬೇಕು.
ತೆಂಗಿನ ನೀರಿನಲ್ಲಿರುವ ಎಲೆಕ್ಟ್ರೋಲೈಟ್‌ಗಳು ಜಲಸಂಚಯನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಮಧುಮೇಹಿಗಳಿಗೆ ಅಗತ್ಯವಾದ ಆಹಾರವಾಗಿದೆ. ಇನ್ನು ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ. ಮೆಗ್ನೀಸಿಯಮ್ ಇನ್ಸುಲಿನ್ ಸಂವೇದನೆಗೆ ಸಹಾಯ ಮಾಡುತ್ತದೆ ಮತ್ತು ಗ್ಲೂಕೋಸ್ ನಿಯಂತ್ರಣಕ್ಕೆ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರನ್ನು ಕುಡಿಯುವುದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಬಹುದು, ಆದರೆ ಹೆಚ್ಚು ಕುಡಿಯುವುದು ಒಳ್ಳೆಯದಲ್ಲ.
ಮಧುಮೇಹಿಗಳು ತೆಂಗಿನ ನೀರು ಕುಡಿದ ನಂತರವೂ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡುವುದು ಅವಶ್ಯಕವಾಗಿದೆ. ಮಧುಮೇಹಿಗಳು ತೆಂಗಿನ ನೀರನ್ನು ಸೇವಿಸಲು ಬಯಸಿದರೆ, ವೈದ್ಯರ ಸಲಹೆಯನ್ನು ಪಡೆದು ಸೇವಿಸಬೇಕು. ವಿಶೇಷವಾಗಿ ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿರುವವರು ತೆಂಗಿನ ನೀರನ್ನು ತಪ್ಪಿಸುವುದು ಉತ್ತಮ.
(ಏಜೆನ್ಸೀಸ್)ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ