Cancer Prevention ಸಾಂದರ್ಭಿಕ ಚಿತ್ರ 
ಲೈಫ್‌ಸ್ಟೈಲ್

ಕ್ಯಾನ್ಸರ್‌ಗೆ ಇಂದೇ ಇಡಿ ಬ್ರೇಕ್! ನಿಮ್ಮ ಜೀವ ಉಳಿಸಿಕೊಳ್ಳಲು ಕೈಬಿಡಬೇಕಾದ ಆ ಮಾರಕ ಅಭ್ಯಾಸಗಳಿವು.. Cancer Prevention

ಪ್ರಮುಖ ಮುಖ್ಯಾಂಶಗಳು

  • ಕ್ಯಾನ್ಸರ್ ಎಂಬ ಹೆಸರು ಕೇಳಿದ ತಕ್ಷಣ ಇಂದಿಗೂ ಪ್ರತಿಯೊಬ್ಬರಲ್ಲೂ ಒಂದು ರೀತಿಯ ಭಯ
  • ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಜಾಗತಿಕವಾಗಿ ಮತ್ತು ಭಾರತದಲ್ಲಿ ತೀವ್ರವಾಗಿ ಹೆಚ್ಚುತ್ತಿದೆ
  • ಕೇವಲ ಒಂದು ಅಭ್ಯಾಸ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಯುತ್ತದೆ ಎಂಬಂತಹ ಹೇಳಿಕೆಗಳನ್ನು ನಂಬಬೇಡಿ
Cancer Prevention: ಕ್ಯಾನ್ಸರ್ ಎಂಬ ಹೆಸರು ಕೇಳಿದ ತಕ್ಷಣ ಇಂದಿಗೂ ಪ್ರತಿಯೊಬ್ಬರಲ್ಲೂ ಒಂದು ರೀತಿಯ ಭಯ ಆವರಿಸಿಕೊಳ್ಳುತ್ತದೆ. ವೈದ್ಯಕೀಯ ಲೋಕವು ಎಷ್ಟೇ ಮುಂದುವರಿದಿದ್ದರೂ, ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಜಾಗತಿಕವಾಗಿ ಮತ್ತು ಭಾರತದಲ್ಲಿ ತೀವ್ರವಾಗಿ ಹೆಚ್ಚುತ್ತಿದೆ. ಆದರೆ, ಎಲ್ಲಾ ಕ್ಯಾನ್ಸರ್‌ಗಳನ್ನು ಸಂಪೂರ್ಣವಾಗಿ ತಪ್ಪಿಸಲು ಸಾಧ್ಯವಾಗದಿದ್ದರೂ, ನಮ್ಮ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಅನೇಕ ರೀತಿಯ ಕ್ಯಾನ್ಸರ್‌ಗಳ ಅಪಾಯವನ್ನು ಶೇಕಡಾ 38 ಕ್ಕಿಂತ ಹೆಚ್ಚು ತಡೆಯಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ  ಸೇರಿದಂತೆ ಪ್ರಮುಖ ಆರೋಗ್ಯ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಧೂಮಪಾನ ಬಿಡುವುದು 

ಸಿಗರೇಟ್​, ಬೀಡಿ ಮಾತ್ರವಲ್ಲ ತಂಬಾಕು ಜಗಿಯುವುದು ಅಭ್ಯಾಸವೂ ಕೂಡ ಬಾಯಿ, ಗಂಟಲು, ಶ್ವಾಸಕೋಶ ಮತ್ತು ಅನ್ನನಾಳದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಆದಾಗ್ಯೂ, ಧೂಮಪಾನ ಬಿಡುವುದರಿಂದ ಕಾಲಾನಂತರದಲ್ಲಿ ಈ ಅಪಾಯ ಕಡಿಮೆಯಾಗುತ್ತದೆ ಮತ್ತು ದೇಹವು ಚೇತರಿಸಿಕೊಳ್ಳಲು ಅವಕಾಶ ಸಿಗುತ್ತದೆ.

ಅತಿಯಾದ ಮದ್ಯ ಸೇವನೆಯನ್ನು ತಪ್ಪಿಸಿ

ನಿಯಮಿತವಾಗಿ ಮದ್ಯಪಾನ ಮಾಡುವವರಿಗೆ ಯಕೃತ್ತು, ಬಾಯಿ, ಗಂಟಲು, ಸ್ತನ ಮತ್ತು ಕೊಲೊನ್ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗಿರುತ್ತದೆ ಎಂದು ಅಧ್ಯಯನಗಳು ತೋರಿಸುತ್ತದೆ. ಮದ್ಯ ಸೇವನೆಯನ್ನು ಕಡಿಮೆ ಮಾಡುವುದು ಅಥವಾ ಸಂಪೂರ್ಣವಾಗಿ ಬಿಡುವುದರಿಂದ ದೀರ್ಘಕಾಲೀನ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

ಸಂಸ್ಕರಿಸಿದ ಆಹಾರಗಳನ್ನು ತಪ್ಪಿಸಿ

ಪ್ಯಾಕ್ ಮಾಡಿದ ಆಹಾರಗಳು, ಸಂಸ್ಕರಿಸಿದ ಮಾಂಸಗಳು ಮತ್ತು ಸಕ್ಕರೆ ಅಧಿಕವಾಗಿರುವ ಆಹಾರಗಳನ್ನು ಸೇವಿಸುವುದರಿಂದ ಕೆಲವು ಕ್ಯಾನ್ಸರ್​ ಅಪಾಯವನ್ನು ಹೆಚ್ಚಿಸಬಹುದು. ಹಾಗಾಗಿ ಇವುಗಳ ಬದಲಿಗೆ, ನಿಮ್ಮ ಆಹಾರದಲ್ಲಿ ಹೆಚ್ಚಿನ ತರಕಾರಿಗಳು, ಹಣ್ಣುಗಳು ಮತ್ತು ಧಾನ್ಯಗಳನ್ನು ಸೇರಿಸಿಕೊಳ್ಳಿ. ಇದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು. 

ದೈಹಿಕ ವ್ಯಾಯಾಮ ಮಾಡಿ

ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವ ಮುಖ್ಯ ರಹಸ್ಯವೆಂದರೆ ನಿಯಮಿತ ದೈಹಿಕ ವ್ಯಾಯಾಮ. ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ನಡೆಯುವುದು ಅಥವಾ ಇತರ ವ್ಯಾಯಾಮಗಳನ್ನು ಮಾಡುವುದರಿಂದ ತೂಕವನ್ನು ನಿಯಂತ್ರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಸ್ತನ ಮತ್ತು ಕೊಲೊನ್ ಸೇರಿದಂತೆ ಕೆಲವು ಕ್ಯಾನ್ಸರ್‌ಗಳ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಗಮನಸೆಳೆದಿದ್ದಾರೆ.
ಇದರೊಂದಿಗೆ, ಸಾಕಷ್ಟು ನಿದ್ರೆ ಪಡೆಯುವುದು, ಒತ್ತಡವನ್ನು ನಿರ್ವಹಿಸುವುದು, ನಿಮ್ಮ ಚರ್ಮವನ್ನು ಸೂರ್ಯನ ಬೆಳಕಿನಿಂದ ರಕ್ಷಿಸುವುದು ಮತ್ತು ವಯಸ್ಸು ಮತ್ತು ಅಪಾಯಕ್ಕೆ ಅನುಗುಣವಾಗಿ ನಿಯಮಿತವಾಗಿ ಕ್ಯಾನ್ಸರ್ ಸ್ಕ್ರೀನಿಂಗ್ ಪರೀಕ್ಷೆಗಳಿಗೆ ಒಳಗಾಗುವುದು ಸಹ ಅತ್ಯಗತ್ಯ. ಕ್ಯಾನ್ಸರ್ ಅನ್ನು ಮೊದಲೇ ಪತ್ತೆ ಮಾಡಿದರೆ ಯಶಸ್ವಿ ಚಿಕಿತ್ಸೆಯ ಸಾಧ್ಯತೆಗಳು ಹೆಚ್ಚು.
ಕೇವಲ ಒಂದು ಅಭ್ಯಾಸ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಯುತ್ತದೆ ಎಂಬಂತಹ ಹೇಳಿಕೆಗಳನ್ನು ನಂಬಬೇಡಿ. ಧೂಮಪಾನವನ್ನು ತ್ಯಜಿಸುವುದು, ಮದ್ಯಪಾನ ಸೇವನೆಯನ್ನು ಮಿತಿಗೊಳಿಸುವುದು, ಆರೋಗ್ಯಕರ ಆಹಾರವನ್ನು ಸೇವಿಸುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುವುದನ್ನು ಒಳಗೊಂಡಿರುವ ಜೀವನಶೈಲಿಯು ನಿಮ್ಮ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ (ಏಜೆನ್ಸೀಸ್​).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.