ಲೈಫ್‌ಸ್ಟೈಲ್

ನಿಯಮಿತವಾಗಿ ಇದನ್ನು ತಿಂದ್ರೆ ಸಾಕು ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್​ ಎಲ್ಲ ಕರಗಿ ಹೋಗುತ್ತೆ! Bad Cholesterol

Bad Cholesterol : ಇಂದಿನ ಆಧುನಿಕ ಜಗತ್ತಿನಲ್ಲಿ ಜನರ ಜೀವನಶೈಲಿ ತುಂಬಾ ಬದಲಾವಣೆಯಾಗಿದೆ. ಎಲ್ಲದರಲ್ಲೂ ಬಿಜಿಯಾಗಿರುವ ಮನುಷ್ಯ ತನ್ನ ಆರೋಗ್ಯವನ್ನೇ ಮರೆಯುತ್ತಿದ್ದಾನೆ. ಪ್ರಸ್ತುತ ಜೀವನಶೈಲಿಯಿಂದಾಗಿ ಅನೇಕ ಮಂದಿ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದೂ ಸಹ, ವಯಸ್ಸಿನ ಯಾವುದೇ ವ್ಯತ್ಯಾಸವಿಲ್ಲದೇ ಜನರು ಹೃದಯ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ.

ಈ ಪಿಸ್ತಾ ಬೀಜಗಳು ಆರೋಗ್ಯಕ್ಕೆ ಉತ್ತಮವಾದ ಪೌಷ್ಟಿಕ ಆಹಾರವಾಗಿದೆ. ಪ್ರೋಟೀನ್‌, ಫೈಬರ್, ಆರೋಗ್ಯಕರ ಕೊಬ್ಬುಗಳು, ಜೀವಸತ್ವಗಳು ಮತ್ತು ಅನೇಕ ಖನಿಜಗಳಿಂದ ಪಿಸ್ತಾ ಬೀಜಗಳು ಸಮೃದ್ಧವಾಗಿವೆ. ಪ್ರತಿದಿನ ಕೆಲವು ಪಿಸ್ತಾಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ

ನಿರ್ದಿಷ್ಟವಾಗಿ ಹೇಳುವುದಾದರೆ, ಈ ಪಿಸ್ತಾಗಳಲ್ಲಿರುವ ಏಕ-ಅಪರ್ಯಾಪ್ತ ಮತ್ತು ಬಹು-ಅಪರ್ಯಾಪ್ತ ಕೊಬ್ಬುಗಳು ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಬಹಳ ಸಹಾಯಕವಾಗಿವೆ. ಅವು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಜೀರ್ಣಕ್ರಿಯೆ ಸುಧಾರಣೆ

ಪಿಸ್ತಾದಲ್ಲಿರುವ ಉತ್ಕರ್ಷಣ ನಿರೋಧಕಗಳು, ವಿಶೇಷವಾಗಿ ಲುಟೀನ್ ಮತ್ತು ಜಿಯಾಕ್ಸಾಂಥಿನ್, ಕಣ್ಣುಗಳನ್ನು ಹಾನಿಕಾರಕ ಬೆಳಕಿನಿಂದ ರಕ್ಷಿಸುತ್ತವೆ. ಇದಲ್ಲದೆ, ಅವುಗಳಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಮಧುಮೇಹಿಗಳಿಗೆ ಅನುಕೂಲ

ಮಧುಮೇಹ ಇರುವವರಿಗೂ ಪಿಸ್ತಾ ಒಳ್ಳೆಯದು. ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಇದಲ್ಲದೆ, ಪಿಸ್ತಾದಲ್ಲಿರುವ ಹೆಚ್ಚಿನ ಪ್ರೋಟೀನ್ ಅಂಶವು ದೇಹದ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹವನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ಪ್ರತಿದಿನ ಸಣ್ಣ ಪ್ರಮಾಣದಲ್ಲಿ ಪಿಸ್ತಾ ಸೇವಿಸುವುದು ಆರೋಗ್ಯವನ್ನು ಬಲಪಡಿಸುವ ನೈಸರ್ಗಿಕ ಮಾರ್ಗವಾಗಿದೆ.

ಲೈಂಗಿಕ ಕಾರ್ಯಕ್ಷಮತೆ

ವಿವಾಹಿತ ಪುರುಷರು ದಿನನಿತ್ಯ ಪಿಸ್ತಾ ಸೇವನೆ ಮಾಡುವುದರಿಂದ ತಮ್ಮ ಲೈಂಗಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದಲ್ಲದೆ, ಇದರಲ್ಲಿರುವ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ. ಪಿಸ್ತಾ ಸೇವನೆಯಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ರಕ್ತಹೀನತೆ ನಿವಾರಣೆ

ವಾಯುಮಾಲಿನ್ಯದಿಂದ ಚರ್ಮದ ಸಮಸ್ಯೆಯಿಂದ ಬಳಲುತ್ತಿರುವವರಿಗೂ ಪಿಸ್ತಾ ಪರಿಣಾಮಕಾರಿ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ರಕ್ತಹೀನತೆ ಮತ್ತು ರಕ್ತದೊತ್ತಡದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಆಗಾಗ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಪಿಸ್ತಾ ಬೀಜಗಳನ್ನು ನಿತ್ಯವೂ ಸೇವಿಸಬೇಕು.

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.