ಲೈಫ್‌ಸ್ಟೈಲ್

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗ್ಬೇಕಾ? ನಿತ್ಯ ಆಹಾರದಲ್ಲಿ ಹೆಸರು ಬೇಳೆಯನ್ನು ಸೇರಿಸಿಕೊಳ್ಳಿ

ಪ್ರತಿಯೊಬ್ಬರ ದೇಹಕ್ಕೂ ಅಗತ್ಯ ಪ್ರಮಾಣದ ಕೊಲೆಸ್ಟ್ರಾಲ್ ಅಗತ್ಯವಿದೆ. ಏಕೆಂದರೆ, ಈ ಕೊಲೆಸ್ಟ್ರಾಲ್ ಚಯಾಪಚಯ ಕ್ರಿಯೆಯನ್ನು ಪರಿಣಾಮಕಾರಿಯಾಗಿ ನಡೆಸಲು ಸಹಾಯ ಮಾಡುತ್ತದೆ. ಆದರೆ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಇರುತ್ತದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಇದ್ದರೆ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ. ಆದರೆ, ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಹಲವು ರೀತಿಯ ದೀರ್ಘಕಾಲದ ಕಾಯಿಲೆಗಳು ಬರುವ ಸಾಧ್ಯತೆಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಆಧುನಿಕ ಜೀವನಶೈಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಅನೇಕ ಜನರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಕೆಟ್ಟ ಕೊಲೆಸ್ಟ್ರಾಲ್ ಪ್ರತಿಯೊಬ್ಬರಲ್ಲೂ ದಿನದಿಂದ ದಿನಕ್ಕೆ ವೇಗವಾಗಿ ಹೆಚ್ಚುತ್ತಿದೆ. ಈ ಕೆಟ್ಟ ಕೊಬ್ಬು ಹೆಚ್ಚಾಗಲು ಹಲವು ಕಾರಣಗಳಿವೆ. ಅನಾರೋಗ್ಯಕರ ಆಹಾರ ಸೇವನೆ ಹಾಗೂ ಆಧುನಿಕ ಜೀವನಶೈಲಿಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ವಿಪರೀತವಾಗಿ ಹೆಚ್ಚುತ್ತಿದೆ.

ಹೃದಯಾಘಾತದ ಅಪಾಯ ಹೆಚ್ಚು

ಈ ಕೆಟ್ಟ ಕೊಬ್ಬು ಹೆಚ್ಚಾಗುವುದರಿಂದ ದೇಹವು ಅನೇಕ ರೀತಿಯ ದೀರ್ಘಕಾಲದ ಕಾಯಿಲೆಗಳಿಗೆ ತುತ್ತಾಗುತ್ತದೆ. ಅವರಲ್ಲಿ ಹೆಚ್ಚಿನವರು ಕೊಲೆಸ್ಟ್ರಾಲ್ ಹೆಚ್ಚಳದಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯಾಘಾತದಿಂದ ಬಳಲುತ್ತಿದ್ದಾರೆ. ಆದ್ದರಿಂದ, ಈ ಸಮಸ್ಯೆಗಳನ್ನು ತಪ್ಪಿಸಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

ನಿಮ್ಮ ಡಯಟ್​ನಲ್ಲಿ ಇರಲಿ ಹೆಸರು ಬೇಳೆ

ಕೊಲೆಸ್ಟ್ರಾಲ್‌ನಿಂದಾಗಿ ಆಗಾಗ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಜನರು, ಆರೋಗ್ಯ ತಜ್ಞರ ಶಿಫಾರಸ್ಸಿನಂತೆ ತಮ್ಮ ದೈನಂದಿನ ಆಹಾರದಲ್ಲಿ ಹೆಸರು ಬೇಳೆ ಅಥವಾ ಮೂಂಗ್ ದಾಲ್ ಅನ್ನು ತೆಗೆದುಕೊಳ್ಳಬೇಕು. ಆದರೆ, ಇದು ಮಿತಿಯಾಗಿರಲಿ ಮತ್ತು ನಿಯಮಿತವಾಗಿರಲಿ. ಈ ಮೂಂಗ್​ ದಾಲ್​ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಮತ್ತು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ದೇಹವನ್ನು ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಹೃದಯವನ್ನೂ ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ದೇಹವು ಅನೇಕ ಪ್ರಯೋಜನಗಳನ್ನು ಪಡೆಯುತ್ತದೆ.

ಏನೆಲ್ಲ ಪೋಷಕಾಂಶಗಳಿವೆ?

ಈ ಮೂಂಗ್​ ದಾಲ್‌ನಲ್ಲಿರುವ ಪೊಟ್ಯಾಸಿಯಮ್, ಕಬ್ಬಿಣ, ಮೆಗ್ನೀಸಿಯಮ್, ತಾಮ್ರ, ಫೈಬರ್, ವಿಟಮಿನ್ ಬಿ 6, ವಿಟಮಿನ್ ಸಿ ಮತ್ತು ಫೈಬರ್ ಪೋಷಕಾಂಶಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. (ಏಜೆನ್ಸೀಸ್​)