Almonds: ದಿನನಿತ್ಯ 4 ಬಾದಾಮಿ ಸೇವಿಸುವುದರಿಂದ ಆರೋಗ್ಯದಲ್ಲಿ ಅನೇಕ ಪ್ರಯೋಜನಗಳನ್ನು ನೀಡುತ್ತದೆ.ಬಾದಾಮಿಯಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹಾಗೇ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ್ನು ದೂರ ಮಾಡುತ್ತದೆ.
ದಿನಕ್ಕೆ 4-6 ನೆನೆಸಿದ ಬಾದಾಮಿಗಳನ್ನು ತಿನ್ನುವುದು ಸಾಮಾನ್ಯವಾಗಿ ಒಳ್ಳೆಯದು, ಆದರೆ ಅತಿಯಾದ ಸೇವನೆಯಿಂದ ಕ್ಯಾಲರಿಗಳು ಹೆಚ್ಚಾಗಬಹುದು. ಯಾವುದೇ ಆರೋಗ್ಯ ಸಮಸ್ಯೆಗೆ ಚಿಕಿತ್ಸೆಯಾಗಿ ಬಾದಾಮಿಯನ್ನು ಬಳಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು.
ಇದನ್ನೂ ಓದಿ: 46 ವರ್ಷಗಳ ನಂತರ ಮತ್ತೆ ಒಟ್ಟಿಗೆ ನಟಿಸಲಿದ್ದಾರೆ ರಜನಿಕಾಂತ್ ಮತ್ತು ಕಮಲ್ ಹಾಸನ್! Rajinikanth and Kamal Haasan
ನೆನೆಸಿದ ಬಾದಾಮಿಯಲ್ಲಿ ರಿಬೋಫ್ಲಾವಿನ್ (ವಿಟಮಿನ್ B2) ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಿವೆ. ಇವು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸಿ, ಸ್ಮರಣ ಶಕ್ತಿಯನ್ನು ಉತ್ತೇಜಿಸುತ್ತದೆ. ಇವು ಮಕ್ಕಳಿಗೆ ವಯಸ್ಸಾದವರಿಗೆ ವಿಶೇಷವಾಗಿ ಪ್ರಯೋಜನಗಳನ್ನು ನೀಡುತ್ತದೆ.
ಬಾದಾಮಿಯ ಚರ್ಮದಲ್ಲಿರುವ ಟ್ಯಾನಿನ್‌ಗಳು ನೆನೆಸಿದಾಗ ಕಡಿಮೆಯಾಗುತ್ತವೆ, ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.ಅದರೊಂದಿಗೆ ಇದರಲ್ಲಿರುವ ಫೈಬರ್ ಅಂಶವು ಮಲಬದ್ಧತೆಯನ್ನು ತಡೆಗಟ್ಟುತ್ತದೆ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.
ಬಾದಾಮಿಯಲ್ಲಿರುವ ಮೊನೊಸ್ಯಾಚುರೇಟೆಡ್ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗೂ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ತಗ್ಗಿಸುತ್ತವೆ. ಮೆಗ್ನೀಸಿಯಂ ಮತ್ತು ಪೊಟ್ಯಾಸಿಯಂನಂತಹ ಖನಿಜಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ.
ಬಾದಾಮಿಯಲ್ಲಿರುವ ಪೊಟ್ಯಾಸಿಯಂ ಮತ್ತು ಕಡಿಮೆ ಸೋಡಿಯಂ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯಕವಾಗಿದೆ.
ಫೈಬರ್, ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಕೂಡಿದ ಬಾದಾಮಿ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ, ಏಕೆಂದರೆ ಇದು ದೀರ್ಘಕಾಲ ಹಸಿವನ್ನು ತಡೆಯುತ್ತದೆ.
ವಿಟಮಿನ್ E ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿಡುತ್ತವೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತವೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ. ನೆನಸಿದ ಬಾದಾಮಿಯನ್ನು ಸೇವಿಸುವುದರಿಂದ ಕ್ಯಾಲ್ಸಿಯಂ, ಮೆಗ್ನೀಸಿಯಂ ಮತ್ತು ಫಾಸ್ಫರಸ್ಗಳು ಮೂಳೆಗಳನ್ನು ಬಲಪಡಿಸುತ್ತವೆ, ಆಸ್ಟಿಯೊಪೊರೋಸಿಸ್‌ನಂತಹ ಸಮಸ್ಯೆಗಳನ್ನು ತಡೆಯುತ್ತವೆ. (ಏಜೆನ್ಸೀಸ್)
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ