Nitish Kumar: ಬಿಹಾರದಲ್ಲಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರ ಯುವಕರಿಗೆ 1 ಕೋಟಿ ಉದ್ಯೋಗಗಳನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಹಾರ ಸಿಎಂ, 2020 ರಲ್ಲಿ, ಸಾತ್ ನಿಶ್ಚಯ್ -2 ರ ಅಡಿಯಲ್ಲಿ, ನಮ್ಮ ಸರ್ಕಾರ 50 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗವನ್ನು ಒದಗಿಸುವ ಗುರಿಯನ್ನು ಪೂರೈಸಿದೆ. ಅಲ್ಲದೆ, ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ 1 ಕೋಟಿ ಯುವಕರಿಗೆ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಸರ್ಕಾರವು ವಿವಿಧ ಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮತ್ತು ಸ್ವಯಂ ಉದ್ಯೋಗವನ್ನು ಅನುಸರಿಸುವವರನ್ನು ಪ್ರೋತ್ಸಾಹಿಸುತ್ತಿದೆ. ಬಿಹಾರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓಧಿ: ಭಾರತಕ್ಕೆ ಸುಂಕ ವಿಧಿಸುವುದರಿಂದ ಪುಟಿನ್ ಯುದ್ದ ನಿಲ್ಲಿಸುವುದಿಲ್ಲ: ಯುಎಸ್ ಡೆಮೋಕ್ರಾಟ್ ಸಮಿತಿ| America
ಬಿಹಾರದಲ್ಲಿ ಕೈಗಾರಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಹೆಚ್ಚಿನ ಸವಲತ್ತುಗಳನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ವಿವರವಾದ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಸಿಎಂ ನಿತೀಶ್ ಹೇಳಿದರು.
ಬಿಹಾರದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವುದು. ಯುವಕರನ್ನು ಕೌಶಲ್ಯ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು. ಗರಿಷ್ಠ ಉದ್ಯೋಗಾವಕಾಶಗಳನ್ನು ನೀಡುವುದು ಮತ್ತು ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸುವುದು ರಾಜ್ಯ ಸರ್ಕಾರದ ಉಪಕ್ರಮದ ಉದ್ದೇಶವಾಗಿದೆ ಎಂದು ನಿತೀಶ್ ಸ್ಪಷ್ಟಪಡಿಸಿದ್ದಾರೆ.(ಏಜೆನ್ಸೀಸ್)