ನ್ಯೂಸ್

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಇಬ್ಬರ ಸಾವು, ಹಲವರಿಗೆ ಗಾಯ!

ಗೊಂಡಾ: ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತದ ಬೆನ್ನಲ್ಲೇ, ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ.

ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ 15 ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವಿನ ಪಿಕೌರಾದ ಬಳಿ ಗುರುವಾರ ಹಳಿತಪ್ಪಿರಿಂದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.

ಈ ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಚಂಡೀಗಢದಿಂದ ಗೋರಖ್‌ಪುರಕ್ಕೆ ಹೋಗುತ್ತಿರುವಾಗ ಮಧ್ಯಾಹ್ನ 2.37ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಗತ್ಯ ವೈದ್ಯಕೀಯ ಸೇವೆ ಒದಗಿಸುವಂತೆ ಸೂಚಿಸಲಾಗಿದೆ. ಸಕಾಲದಲ್ಲಿ ಸೇವೆ ಒದಗಿಸಲು ಸಮೀಪದ ಆಸ್ಪತ್ರಗೆಳಿಗೆ ತಿಳಿಸಲಾಗಿದೆ. ರೈಲ್ವೆ ಇಲಾಖೆಯ ಎಲ್ಲಾ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸುತ್ತಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಈಶಾನ್ಯ ರೈಲ್ವೆ ಸಿಪಿಆರ್‌ಒ ಪಂಕಜ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಈ ರೈಲು ಅವಘಡ ನಡೆದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿಲ್ಲಾ ಸೂಚಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.