ನ್ಯೂಸ್

ನೌಕಾಪಡೆಯ 2 ಹೆಲಿಕಾಪ್ಟರ್​ಗಳ ಪತನ; 10 ಮಂದಿ ಸಾವು

ನವದೆಹಲಿ: ಪೆರಾಕ್​ನ ಲುಮುಟ್​ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್​ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಂಗಳವಾರ ಬೆಳಗ್ಗೆ ಲುಮುಟ್ ನೌಕಾ ನೆಲೆಯಲ್ಲಿ 9.32 ಗಂಟೆಗೆ ಈ ಘಟನೆ ನಡೆದಿದೆ. ರಾಯಲ್ ಮಲೇಷಿಯನ್ ನೇವಿ ಪರೇಡ್‌ಗಾಗಿ ಹೆಲಿಕಾಪ್ಟರ್‌ಗಳು ಪೂರ್ವಾಭ್ಯಾಸ ಮಾಡುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಗುರುತುಗಾಗಿ ಲುಮುಟ್ ಸೇನಾ ಮೂಲ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.