ನ್ಯೂಸ್

Bus-Car ಮುಖಾಮುಕಿ ಡಿಕ್ಕಿ; ಮಹಾಕುಂಭಮೇಳಕ್ಕೆ ಪ್ರಯಾಣಿಸುತ್ತಿದ್ದ 10 ಮಂದಿ ಸಾವು

ಪ್ರಯಾಗ್​ರಾಜ್​: ಕಾರು ಹಾಗೂ ಬಸ್ (Bus-Car) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರದ ಮೆಜಾ ಪ್ರದೇಶದಲ್ಲಿ ನಡೆದಿದೆ.

ಮೃತರೆಲ್ಲರೂ ಛತ್ತೀಸ್​ಗಢದ ಕೊರ್ಬಾ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್​ರಾಜ್​ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತರು ಛತ್ತೀಸ್​ಗಢದ ಕೊರ್ಬಾ ಮೂಲದವರು ಎಂದು ತಿಳಿದು ಬಂದಿದ್ದು, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಕಾರಿನಲ್ಲಿ (Car) ತೆರಳುತ್ತಿದ್ದರು. ಬಸ್​ ಮಧ್ಯಪ್ರದೇಶದ ರಾಜ್​ಗಢದಿಂದ ತೆರಳುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಗಾಯಾಳುಗಳು ಸೂಕ್ತ ಚಿಕಿತ್ಸೆ ಕೊಡಿಸುವಂತೆ, ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಮತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.