ನ್ಯೂಸ್

ಪಾಕ್ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: CM ಒಮರ್ ಅಬ್ದುಲ್ಲಾ | Jammu and Kashmir

Jammu and Kashmir: ಪಾಕಿಸ್ತಾನ ನಡೆಸಿದ ಶೆಲ್​​ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶನಿವಾರ (ಮೇ.10) ಘೋಷಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7 ರಂದು ಭಾರತೀಯ ಸಶಸ್ತ್ರ ಪಡೆಗಳು ಗಡಿಯುದ್ದಕ್ಕೂ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಮಾಡಿದ ನಂತರ ಕಳೆದ ನಾಲ್ಕು ದಿನಗಳಲ್ಲಿ ಪೂಂಚ್, ರಾಜೌರಿ, ಜಮ್ಮು ಮತ್ತು ಬಾರಾಮುಲ್ಲಾ ವಲಯಗಳಲ್ಲಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತರು ಮತ್ತು 19 ಗ್ರಾಮಸ್ಥರು ಸಾವನ್ನಪ್ಪಿದ್ದರು.

ಬುಧವಾರ ಪೂಂಚ್‌ನಲ್ಲಿ 12 ನಾಗರಿಕರು ಮೃತಪಟ್ಟರೆ, ಶುಕ್ರವಾರ ಉರಿ ಮತ್ತು ಪೂಂಚ್‌ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಿಗ್ಗೆ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿ ಸೇರಿದಂತೆ ಐದು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

"ಇತ್ತೀಚೆಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಅಮಾಯಕರ ಜೀವಹಾನಿಯಿಂದ ತೀವ್ರ ನೋವುಂಟಾಗಿದೆ. ನಮ್ಮ ಜನರ ಕಷ್ಟವನ್ನು ಕಡಿಮೆ ಮಾಡಲು ನನ್ನ ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ" ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ, ಕುಟುಂಬಕ್ಕೆ ಉಂಟಾದ ಆಘಾತವನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ ಅವರಿಗೆ ಬೆಂಬಲ ಮತ್ತು ಸಹಕಾರಕ್ಕಾಗಿ ಮೃತಪಟ್ಟ ಎಲ್ಲರ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಒಮರ್ ಅಬ್ದುಲ್ಲಾ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. (ಏಜೆನ್ಸೀಸ್​)