Naxals: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 10 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ (ಸೆಪ್ಟೆಂಬರ್,11) ತಿಳಿಸಿದ್ದಾರೆ.
ನಿಷೇಧಿತ ಸಂಘಟನೆಯಾದ ಸಿಪಿಐ ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಸಮಿತಿ ಸದಸ್ಯ ಮೋಡೆಮ್ ಬಾಲಕೃಷ್ಣ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾತನಾಡಿದ ರಾಯ್‌ಪುರ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮರೇಶ್ ಮಿಶ್ರಾ, ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿಗಳು ತೆರಳಿದ್ದಾಗ ಗುಂಡಿನ ಚಕಮಕಿ ನಡೆದಿದೆ ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡು ಬಿಹಾರ ಅಲ್ಲ: ಚುನಾವಣಾ ಆಯೋಗದ SIR ಅಳವಡಿಕೆಯನ್ನು ತಿರಸ್ಕರಿಸಿದ ಡಿಎಂಕೆ ಸಚಿವ ದುರೈ ಮುರುಗನ್
ಅಲ್ಲದೆ, ಛತ್ತೀಸ್‌ಗಢ ಪೊಲೀಸರ ಒಂದು ಘಟಕ, (STF ) E-ಜಿಲ್ಲಾ ಪೊಲೀಸರ ಒಂದು ಘಟಕ, CoBRA ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್, CRPF ಮತ್ತು ಇತರ ರಾಜ್ಯ ಪೊಲೀಸ್ ಘಟಕಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಇನ್ನೂ ಮಧ್ಯಂತರ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಐಜಿಪಿ ಹೇಳಿದ್ದಾರೆ. ಅಲ್ಲದೆ, ಹಿರಿಯ ಕಾರ್ಯಕರ್ತರು ಸೇರಿದಂತೆ ಹತ್ತು ನಕ್ಸಲರನ್ನು ಇಲ್ಲಿಯವರೆಗೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಮಿಶ್ರಾ ಮಾಹಿತಿ ನೀಡಿದ್ದಾರೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಯ್‌ಪುರದಿಂದ 180 ಕಿ.ಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ಉನ್ನತ ನಕ್ಸಲರ ಚಲನವಲನದ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅಲ್ಲದೆ, ಬಾಲಣ್ಣ, ರಾಮಚಂದರ್ ಮತ್ತು ಭಾಸ್ಕರ್ ಎಂಬ ಕರೆಯಲ್ಪಡುವ ಬಾಲಕೃಷ್ಣ, ಒಡಿಶಾ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿದ್ದರು ಮತ್ತು 1980 ರ ದಶಕದ ಆರಂಭದಲ್ಲಿ ಚಳವಳಿಗೆ ಸೇರಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಇತ್ತೀಚಿನ ಕಾರ್ಯಾಚರಣೆಯಲ್ಲಿ ಈ ವರ್ಷ ಇಲ್ಲಿಯವರೆಗೆ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 241 ನಕ್ಸಲರು ಸಾವನ್ನಪ್ಪಿದ್ದಾರೆ. ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ವಿಭಾಗದಲ್ಲಿ 212 ನಕ್ಸಲರನ್ನು ಜನರನ್ನು ನಿರ್ನಾಮ ಮಾಡಲಾಗಿದೆ. ಆದರೆ ರಾಯ್‌ಪುರ ವಿಭಾಗದ ಗರಿಯಾಬಂದ್ ಜಿಲ್ಲೆಯಲ್ಲಿ 27 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ದುರ್ಗ್ ವಿಭಾಗದ ಮೊಹ್ಲಾ-ಮನ್‌ಪುರ್-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಇತರ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.
ಈ ಮೃತ ನಕ್ಸಲರಲ್ಲಿ ಕೇಂದ್ರ ಸಮಿತಿ ಮತ್ತು ಒಡಿಶಾ ರಾಜ್ಯ ಮಾವೋವಾದಿಗಳ ಸಮಿತಿಯ ಸದಸ್ಯ ಜೈರಾಮ್ ಸೇರಿದ್ದಾರೆ. (ಏಜೆನ್ಸೀಸ್)