ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಜ್ಕುಮಾರ್ ಅಭಿನಯದ 'ಘೋಸ್ಟ್' ಸಿನಿಮಾ ಇದೀಗ ಜೀ5 ಒಟಿಟಿ ಪ್ಲಾಟ್ಫಾರ್ಮ್ಗೆ ಲಗ್ಗೆಯಿಟ್ಟಿದ್ದು, ಇತ್ತೀಚೆಗಷ್ಟೇ ಚಿತ್ರದ 10,000 ಚದರ ಅಡಿಯ ಪೋಸ್ಟರ್ ಅನಾವರಣಗೊಂಡಿತು. ಇದು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರಲಿದೆ ಎಂದು ಚಿತ್ರದ ನಿರ್ದೇಶಕ ಎಂ.ಜಿ. ಶ್ರೀನಿವಾಸ್ ತಿಳಿಸಿದ್ದಾರೆ.
ಇದನ್ನೂ ಓದಿ: ಏಕದಿನ ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ; ಮೊಹಮ್ಮದ್ ಶಮಿಗೆ ಬಂಪರ್ ಗಿಫ್ಟ್ ಘೋಷಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್
ಸಾಹಸ-ಥ್ರಿಲ್ಲರ್ ಜಾನರ್ ಒಳಗೊಂಡ 'ಘೋಸ್ಟ್' ಸಿನಿಮಾ ಇದೇ ನವೆಂಬರ್ 17 ರಂದು ಜೀ5ನಲ್ಲಿ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಶಿವರಾಜ್ಕುಮಾರ್ ನಟನೆಯ ಈ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡದೆ ಇರುವವರು ಇದೀಗ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.
ಚಿತ್ರದ ಉತ್ತಮ ಪ್ರಚಾರ ಕಾರ್ಯಕ್ಕಾಗಿ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ನ ಜೀ5 ಹಾಗೂ ಚಿತ್ರತಂಡ ಬಿಡುಗಡೆಗೊಳಿಸಿದೆ. ಜಯನಗರದ ಎಂಇಎಸ್ ಗ್ರೌಂಡ್ನಲ್ಲಿ ಚಿತ್ರದ 10,000 ಅಡಿ ಪೋಸ್ಟರ್ ಅನಾವರಣಗೊಳಿಸಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಇದೇ ಮೊದಲ ಬಾರಿಗೆ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಲಾಗಿದೆ.
ಇದನ್ನೂ ಓದಿ: World Cup 2023: ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿ ಪಂದ್ಯ ವೀಕ್ಷಿಸಲು ಆಹ್ವಾನ ನೀಡಿದ ಕ್ರಿಕೆಟ್ ಅಭಿಮಾನಿ!
'ಘೋಸ್ಟ್' ಚಿತ್ರದಲ್ಲಿ ಶಿವರಾಜ್ಕುಮಾರ್, ಶ್ರೀನಿವಾಸ್, ಅರ್ಚನಾ ಜೋಯಿಸ್, ಜಯರಾಮ್, ಅನುಪಮ್ ಖೇರ್, ಪ್ರಶಾಂತ್ ನಾರಾಯಣ್, ಸತ್ಯ ಪ್ರಕಾಶ್ ಮುಂತಾದವರ ತಾರಾಗಣವಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ,(ಏಜೆನ್ಸೀಸ್).