Pinarayi Vijayan: ಜನ್ಮಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸಿಪಿಐಎಂ ನಾಯಕ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಇಸ್ರೇಲ್ನ ಜಿಯೋನಿಷ್ಟ್ಗಳಿಗೆ ಹೋಲಿಸಿದ್ದು, ಎರಡೂ ಸಂಘಟನೆಗಳು ಅವಳಿ ಸಹೋದರರು ಎಂದು ಕರೆದಿದ್ದಾರೆ.
ಆರ್‌ಎಸ್‌ಎಸ್ ಸಂಘಟನೆಯ 100ರ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಎಕ್ಸ್ನಲ್ಲಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವವನ್ನು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯದೊಂದಿಗೆ ಸ್ಮರಿಸುವುದು ನಮ್ಮ ಸಂವಿಧಾನಕ್ಕೆ ಮಾಡಿದ ಘೋರ ಅವಮಾನ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟದಿಂದ ದೂರವಿದ್ದ, ವಸಾಹತುಶಾಹಿ ಶಕ್ತಿಗಳೊಂದಿಗೆ ಸೇರಿಕೊಂಡಿದ್ದ, ವಿಭಜಕ ಸಿದ್ಧಾಂತವನ್ನು ಉತ್ತೇಜಿಸುವ ಸಂಘಟನೆಯನ್ನು ಈ ಕ್ರಮವು ಕಾನೂನುಬದ್ಧಗೊಳಿಸುತ್ತದೆ. ಈ ಗೌರವವು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮತ್ತು ಅವರು ಕಲ್ಪಿಸಿಕೊಂಡ ಜಾತ್ಯತೀತ, ಏಕೀಕೃತ ಭಾರತದ ಮೇಲಿನ ನೇರ ದಾಳಿ ಎಂದು ಕಿಡಿಕಾರಿದ್ದಾರೆ. (ಏಜೆನ್ಸೀಸ್)