ಅಗರ್ತಲಾ (ತ್ರಿಪುರ): ಇಲ್ಲಿನ ಅಂತಾರಾಷ್ಟ್ರೀಯ ಗಡಿಯ ಭಾಗದಲ್ಲಿ ದಾಖಲೆಗಳಿಲ್ಲದ ನಾಲ್ವರು ಮಕ್ಕಳು ಸೇರಿದಂತೆ 11 ಜನ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತ್ರಿಪುರಾದ ಧಲೈ ಜಿಲ್ಲೆಯ ಗಡಿ ಭಾಗದ ಹಳ್ಳಿಯೊಂದರಲ್ಲಿ ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಚಿತ ಮಾಹಿತಿಯೊಂದಿಗೆ ಗಂಡಚೆರಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಪಲಾಹ್ ದತ್ತಾ ನೇತೃತ್ವದ ಪೊಲೀಸರ ತಂಡ ಧಲೈ ಜಿಲ್ಲೆಯ ಗಡಿ ಗ್ರಾಮವಾದ ಮಚ್ಕುಮಿರ್‌ನಲ್ಲಿ ಶನಿವಾರ ದಾಳಿ ನಡೆಸಿತು. ಈ ಕಾರ್ಯಾಚರಣೆಯಲ್ಲಿ ಒಟ್ಟು 11 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ಕೋವಿಡ್ ವ್ಯಾಕ್ಸಿನೇಷನ್ ದಾಖಲೆಗಳು ಹಾಗೂ ಬಾಂಗ್ಲಾದೇಶದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ವಿಚಾರಣೆ ನಡೆಸಿದ ಪೊಲೀಸರು, ಅವರು ಮೂರು ವರ್ಷಗಳ ಹಿಂದೆ ಉದ್ಯೋಗಕ್ಕೆ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಹಕೀಂಪುರ್ ಇಂಡೋ-ಬಾಂಗ್ಲಾ ಗಡಿಯ ಮೂಲಕ ಬಾಂಗ್ಲಾದೇಶದಿಂದ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದುತ್ರಿಪುರಾ ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಬೆಂಗಳೂರು ಮತ್ತು ಕೋಲ್ಕತ್ತಾ ಮಾರ್ಗದ ರೈಲು ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಾವು ಬಾಂಗ್ಲಾದೇಶ ಸರ್ಕಾರದಿಂದ ಟಿಕೆಟ್‌ಗಳು, ಕೋವಿಡ್ ವ್ಯಾಕ್ಸಿನೇಷನ್ ದಾಖಲೆಗಳು ಮತ್ತು ಕೆಲವು ಬಾಂಗ್ಲಾದೇಶದ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದೇವೆ.