ನ್ಯೂಸ್

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಕಾರು-ಟ್ರ್ಯಾಕ್ಟರ್​ ಡಿಕ್ಕಿಯಾಗಿ 11 ಮಂದಿ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ

ಮುಜಾಫರ್​ಪುರ: ಎಸ್​ಯುವಿ ಕಾರು ಮತ್ತು ಟ್ರ್ಯಾಕ್ಟರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿ, 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಮುಜಾಫರ್​ಪುರದ ಕಂಟಿ ಪೊಲೀಸ್​ ಠಾಣಾ ಏರಿಯಾದ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ಇಂದು ಬೆಳ್ಳಂಬೆಳಗ್ಗೆ ದುಘಟನೆ ನಡೆದಿದೆ. ಮೃತಪಟ್ಟವರು ಗುರುತು ತಿಳಿದುಬರಬೇಕಿದೆ.

ಸದ್ಯ ಗಂಭೀರವಾಗಿ ಗಾಯಾಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. (ಏಜೆನ್ಸೀಸ್​)