ಕರಾಚಿ: ಪಾಕಿಸ್ತಾನದ ಶಾಪಿಂಗ್ ಮಾಲಗ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಸಜೀವದಹನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು, ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಶಾಪಿಂಗ್ ಮಾಲ್ನ ಎರಡನೇ ಮಹಡಿಯಲ್ಲಿ ದುರ್ಘಟನೆ ಸಂಭವಿಸಿದ್ದು, 6ನೇ ಮಹಡಿವರೆಗೂ ಬೆಂಕಿ ಆವರಿಸಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್; ಸತ್ಯಹರಿಶ್ಚಂದ್ರರಾಗಿದ್ದರೆ ತನಿಖೆಯ ಭಯವೇಕೆ ಎಂದ ಆರ್. ಅಶೋಕ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಚಾರ ತಿಳಿದು ಸ್ಥಳಕ್ಕೆ 12ಕ್ಕೂ ಹೆಚ್ಚು ಅಗ್ನಿಶಾಂಮಕ ವಾಹನಗಳು ದೌಡಾಯಿಸಿದ್ದು, ಈವರೆಗೂ 42ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮಾಲ್ನಲ್ಲಿ ಇನ್ನಷ್ಟು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ.
ಇದು ವಾಣಿಜ್ಯ ಕಟ್ಟಡವಾಗಿದ್ದು, ಮಳಿಗೆಗಳು ಹಾಗೂ ಕಾಲ್ಸೆಂಟರ್ಗಳನ್ನು ಹೊಂದಿದೆ. ಕಳೆದ ವರ್ಷವೂ ಸಹ ಶಾರ್ಟ್ ಸರ್ಕ್ಯೂಟ್ನಿಂದ ಇದೇ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.