ನ್ಯೂಸ್

110ನೇ ಡಿ. ದೇವರಾಜಅರಸು ಅವರ ಜನ್ಮ ದಿನಾಚರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲಾಗಿದೆ.

 ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

 ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

 ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಬೋಸ್ ಅವರು ಆಗಮಿಸಲಿದ್ದಾರೆ.

 ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ., ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ. ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತಿಂದ್ರ ಎಸ್., ಮತ್ತು ವಿವೇಕಾನಂದ ಎಸ್. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

 ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.