ನ್ಯೂಸ್

1,187 ಡಿಡಿ ಕೇಸ್ ದಾಖಲು

ಮಂಜುನಾಥ.ಕೆ

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಕಳೆದ ಏಳು ದಿನಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರ ಸಂಚಾರ ಪೊಲೀಸರು, ಪಾನಮತ್ತ ಚಾಲಕ/ಸವಾರರ ವಿರುದ್ಧ ೧,೧೮೭ ಪ್ರಕರಣ ದಾಖಲಿಸಿದ್ದಾರೆ.

ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಡಿ.೨೩ರಿಂದ ೨೯ರ ವರೆಗೆ ನಗರದ ೫೦ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ಸಂಚಾರ ಪೊಲೀಸರು, ೯೫,೧೭೯ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಈ ಪೈಕಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಚಾಲಕರು/ಸವಾರರ ವಿರುದ್ಧ ೧,೧೮೭ ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ರಸ್ತೆಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವ ಸವಾರರು/ಚಾಲಕರ ವಿರುದ್ಧ ೧೬೫ ಪ್ರಕರಣ ದಾಖಲಿಸಿರುವ ಸಂಚಾರ ಪೊಲೀಸರು, ೧.೬೫ ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ನಗರದಲ್ಲಿ ಪಾನಮತ್ತ ಚಾಲನೆ ಹಾಗೂ ಅತಿವೇಗದ ಚಾಲನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.