ಛತ್ತೀಸ್‌ಘಡ: ಅಮ್ಮನ ಸೀರೆಯಲ್ಲಿ ಉಯ್ಯಾಲೆ ಮಾಡಿಕೊಂಡು ಉಲ್ಲಾಸದಲ್ಲಿ ಆಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಸೀರೆಯ ಬಿಗಿದು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಘಡದ ಪರಶುರಾಮಪುರ ಗ್ರಾಮದಲ್ಲಿ ನಡೆದಿದೆ.
ಅಮ್ಮನ ಸೀರೆಯಲ್ಲಿ ಉಯ್ಯಾಲೆ ಮಾಡಿಕೊಂಡು ಆಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಸೀರೆ ಸುತ್ತಿಕೊಂಡಿದೆ. ಈ ಪರ ಪರಿಣಾಮ ಉಸಿರುಗಟ್ಟಿ ಆಕೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಾಲಕಿಯ ಸ್ಥಿತಿಯನ್ನು ಗಮನಿಸಿದ ಆಕೆ ಅಣ್ಣ ತಂಗಿಯನ್ನು ಕಂಡ ಕೂಡಲೇ ಅಲ್ಲೇ ಹತ್ತಿರದಲ್ಲಿರುವ ರಾಮಾನುಜನಗರ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಳು ಎಂದು ವೈದ್ಯರು ಘೋಷಿಸಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
ಸೀರೆಯಲ್ಲಿ ಬಾಲಕಿಯ ಕುತ್ತಿಗೆ ಸಿಕ್ಕಿಹಾಕಿಕೊಂಡಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಮೃತಳ ತಂದೆ ಸುರ್ದಿರ್ ಸಿಂಗ್ ತಿಳಿಸಿದ್ದಾರೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.