ಸಾಂದರ್ಭಿಕ ಚಿತ್ರ 
ನ್ಯೂಸ್

ಮೊಬೈಲ್​ನಲ್ಲಿ ಗೇಮ್​ ಆಡಬೇಡ ಎಂದ ತಾಯಿ: ಸಿಟ್ಟಿಗೆದ್ದ ಮಗು ಮಾಡಿದ್ದಿಷ್ಟು..

ಗೋಪಾಲ್​​ಗಂಜ್: ಮೊಬೈಲ್​ನಲ್ಲಿ ಗೇಮ್​ ಆಡಬೇಡ ಎಂದು ತಾಯಿ ನಿರ್ಬಂಧ ಹೇರಿದ್ದಕ್ಕೆ 12 ವರ್ಷದ ಮಗುವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ.

ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ: 4 ಜನರ ಬಾಳಿಗೆ ಬೆಳಕಾದ ಮಹಿಳೆ..

ಭರೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊರೆಯನ್ ದೀಕ್ಷಿತ್ ಗ್ರಾಮದ ನಿವಾಸಿ. ಅವರು ಐದನೇ ತರಗತಿಯಲ್ಲಿ ಓದುತ್ತಿದ್ದಾರೆ. ಮೊಬೈಲ್ ಚಟಕ್ಕೆ ಬಿದ್ದಿದ್ದ ಈತ ಮೊಬೈಲ್ ನಲ್ಲಿ ನಿರಂತರವಾಗಿ ಗೇಮ್ ಆಡುತ್ತಿದ್ದ. ಈ ಹಿಂದೆಯೂ ಕುಟುಂಬಸ್ಥರು ಹಲವು ಬಾರಿ ಛೀಮಾರಿ ಹಾಕಿದ್ದರು. ಆದರೆ ಈ ಬಾರಿ ತಾಯಿ ಆತನಿಗೆ ಬೈದಿದ್ದು ಮೊಬೈಲ್​ ಬಳಸದಂತೆ ನಿರ್ಬಂಧ ಹೇರಿದ್ದು, ಇದರಿಂದ ಕೋಪಗೊಂಡ ಮಗು ಮನೆಯಲ್ಲಿಟ್ಟಿದ್ದ ಕೀಟನಾಶಕ ಸೇವಿಸಿದೆ.

ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲಗಂಜ್ ಸದರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ. ಈ ಕುರಿತು ಮಾತನಾಡಿರುವ ವೈದ್ಯರು, ಮಗುವಿನ ಸ್ಥಿತಿ ಇನ್ನೂ ಗಂಭೀರವಾಗಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಮಗುವನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿಯಲ್ಲಿ ಗೆಳತಿ ನೋಡಲು ಬಂದ ಪ್ರಿಯಕರ: ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ..

ಈ ಡಿಜಿಟಲ್ ಯುಗದಲ್ಲಿ, ಪ್ರತಿ ಮಗುವಿನ ಕೈಯಲ್ಲಿ ಮೊಬೈಲ್ ಫೋನ್ ಕಾಣುತ್ತಿದ್ದು ಇದರ ಅತಿಯಾದ ಬಳಕೆ ಕೆಲವೊಮ್ಮೆ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ. ಗೋಪಾಲಗಂಜ್‌ನಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದು, ಪಾಲಕರನ್ನು ಚಿಂತೆಗೀಡು ಮಾಡಿದೆ.(ಏಜೆನ್ಸೀಸ್)