ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 129 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೩೦೧ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ ೬ ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ ೨೪ ಗಂಟೆಯಲ್ಲಿ ೯೫೪ ಮಂದಿಗೆ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ೧೫೯ ಮಂದಿಯಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ೮೦, ಚಿಕ್ಕಬಳ್ಳಾಪುರ ೦೮, ತುಮಕೂರು ೧೨, ದಾವಣಗೆರೆ ೧೦, ಗದಗ ೫, ಯಾದಗಿರಿ ೨, ಬೀದರ್ ೧೩, ಕೊಪ್ಪಳ ೧, ಹಾಸನ ೦೩, ಚಿಕ್ಕಮಗಳೂರು ೨೫ ಪ್ರಕರಣಗಳು ಪತ್ತೆಯಾಗಿವೆ. ಕಳೆದ ೨೪ ಗಂಟೆಗಳಲ್ಲಿ ೧ ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ೩೦೧ ಸಕ್ರಿಯ ಪ್ರಕರಣಗಳ ಪೈಕಿ ೩೫ ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.