ನ್ಯೂಸ್

12ರಿಂದ ಕುರಿ, ಮೇಕೆ ಸಾಕಣೆ ತರಬೇತಿ

ಚಿತ್ರದುರ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಪಶುಪಾಲನ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮೇ 12ರಿಂದ 13 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ವೈಜ್ಞಾನಿಕ ತರಬೇತಿ ಹಮ್ಮಿಕೊಂಡಿದೆ. ಈ ತರಬೇತಿಗೆ ಯಾವುದೇ ಪ್ರೋತ್ಸಾಹಧನ ಇರುವುದಿಲ್ಲ. ರೈತರು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ತ ರಬೇತಿಗೆ 25 ಜನರ ಗುರಿ ನಿಗದಿಪಡಿಸಲಾಗಿದೆ. ಆಸಕ್ತರು ದೂ.ಸಂಖ್ಯೆ 9482943111ಗೆ ವಾಟ್ಸಪ್ ಮೂಲಕ ತಮ್ಮ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕೆಂದು ಪ್ರಕಟಣೆ ಕೋರಿದೆ.