ವಡೋದರಾ: ದಲಿತ ವ್ಯಕ್ತಿಯ ಅಂತಿಮ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 13 ಜನರನ್ನು ಬಂಧಿಸಿರುವ ಘಟನೆ ಗುಜರಾತ್‌ನ ವಡೋದರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಬುಧವಾರದಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ವ್ಯಕ್ತಿಯೊಬ್ಬ ಮೃತಪಟ್ಟಿದ್ದ. ಆದರೆ ಭಾರೀ ಮಳೆಯಿಂದಾಗಿ ಮೃತನ ಸಮುದಾಯದ ಚಿತಾಗಾರವು ಜಲಾವೃತಗೊಂಡಿದ್ದರಿಂದ ಕುಟುಂಬವು ಅಂತಿಮ ಸಂಸ್ಕಾರಕ್ಕಾಗಿ ಪದ್ರಾ ತಾಲೂಕಿನ ಗಮೆಥಾ ಗ್ರಾಮದ ಸಾಮಾನ್ಯ ಸ್ಮಶಾನಕ್ಕೆ ಶವವನ್ನು ಕೊಂಡೊಯ್ದಿತ್ತು.
ಇದನ್ನೂ ಓದಿ: ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಶಾಸಕನ ಪುತ್ರ: ಈಗಾಗಲೇ ಮತ್ತೊಂದು ಪ್ರಕರಣಲ್ಲಿ ಜಾಮೀನಿನ ಮೇಲೆ ಹೊರಗಿದ್ದ..
ಆಗ ಕೆಲವು ಗ್ರಾಮಸ್ಥರು ಅಲ್ಲಿಗೆ ಆಗಮಿಸಿ ಈ ಕ್ರಮವನ್ನು ವಿರೋಧಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಸ್ಥಳಕ್ಕೆ ಧಾವಿಸಿದ್ದು, ಪೊಲೀಸ್ ಠಾಣೆಯಲ್ಲಿ ಈ ಕುರಿತು ಗುರುವಾರ ಎಫ್‌ಐಆರ್ ದಾಖಲಿಸಲಾಗಿದೆ. ಗ್ರಾಮದ ಸರಪಂಚ್‌ನ ಪತಿ ಸೇರಿದಂತೆ 13 ಜನರನ್ನು ಬಂಧಿಸಿದ್ದೇವೆ ಎಂದು ಎಸ್ಪಿ ಹೇಳಿದ್ದಾರೆ.
ಕೊನೆಗೆ ಸಾಮಾನ್ಯ ಸ್ಮಶಾನದ ಸಮೀಪವಿರುವ ಸ್ಥಳದಲ್ಲಿ ವ್ಯಕ್ತಿಯನ್ನು ದಹಿಸಲಾಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಜತೆಗೆ ಗ್ರಾಮದ ಶಾಂತಿ ಕಾಪಾಡಲು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಬಿಡಾರ ಹೂಡಿದ್ದಾರೆ.(ಏಜೆನ್ಸೀಸ್)