ನ್ಯೂಸ್

ಕುಂದಾಪುರದಲ್ಲಿ 13 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು: ನೋವಲ್ಲೂ ಸಾರ್ಥಕತೆ ಮೆರೆದ ಪಾಲಕರು

ಉಡುಪಿ: 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ. ಸಾವಲ್ಲೂ ಬಾಲಕಿ ಸಾರ್ಥಕತೆ ಮೆರೆದಿದ್ದಾಳೆ.

ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ(13) ಮೃತಳು. ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು.

ಬುಧವಾರ ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಬಿದಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾಳೆ. ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮಗಳ ಸಾವಿನಿಂದ ಕಂಗಾಲದ ಪಾಲಕರು, ನೋವಿನಲ್ಲೂ ಅನುಶ್ರೀಯ ಕಣ್ಣುಗಳನ್ನು ದಾನ ಮಾಡಿ ಇತರರ ಬದುಕಿಗೆ ಬೆಳಕಾಗಿದ್ದಾರೆ. ಗುರುವಾರ ರಾತ್ರಿ ಕುಟುಂಬಸ್ಥರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.