ಲಖನೌ: ಇತ್ತೀಚಿನ ದಿನಗಳಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮಗಳನ್ನು ಜಾರಿಗೆ ತಂದರು ಯಾವುದೇ ಪ್ರಯೋಜನವಾಗುತ್ತಿಲ್ಲ.
ಇದೀಗ ಘಟನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ವಯಸಿನ ಬಾಲಕಿ ಒಬ್ಬಳನ್ನು ವ್ಯಕ್ತಿಐಒರ್ವ ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮ ಒಂದರಲ್ಲಿ ನಡೆದಿದೆ.
ಬಾಲಕಿ ತಂದೆ ನೀಡಿದ ದೂರಿನನ್ವಯ ಪೊಲೀಸರು ಅಬ್ದುಲ್ಲಾ ಅಲಿಯಾಸ್ ಗುಲಾಬ್ ಮೊಹಮ್ಮದ್ ಬಹಾಲ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಮೇ 11 ರಂದು ಆರೋಪಿ ಬಾಲಕಿಗೆ ಆಮಿಷವೊಡ್ಡಿ ಅಪಹರಿಸಿ ಕೃತ್ಯ ಎಸಗಿದ್ದು ತಪ್ಪಿತಸ್ಥನ ವಿರುದ್ಧ ಭಾರತ ದಂಡ ಸಂಹಿತೆ(IPC Section) 306(ಅಪಹರಣ), 366(ಮದುವೆಯಾಗುವಂತೆ ಒತ್ತಾಯಿಸುವುದು), 376(ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕಯಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಮೊಹಮ್ಮದ್ ಫಹೀಮ್ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯೂ ಆರೋಪಿ ಅಬ್ದುಲ್ಲಾ ತನ್ನನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿಕೆ ನೀಡಿದ್ದಾಳೆ.
ಆರೋಪಿ ಹಾಗು ಬಾಲಕಿ ರಸ್ದಾ ಕೊಟ್ವಾಲಿ ರೈಲ್ವೇ ನಿಲ್ದಾಣದಲ್ಲಿ ಇರುವ ವೇಳೆ ವಶಕ್ಕೆ ಪಡೆಯಲಾಯಿತು. ಬಂಧಿತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.