ನ್ಯೂಸ್

ರಾಜ್ಯದಲ್ಲಿ 24 ಗಂಟೆಯಲ್ಲಿ 161 ಹೊಸ ಕೊವಿಡ್​-19 ಪ್ರಕರಣಗಳು: ಇಂದು ಯಾದಗಿರಿಯಲ್ಲೇ ಜಾಸ್ತಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 161 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5921ಕ್ಕೆ ಏರಿದೆ.

ಇಂದು ಕರೊನಾದಿಂದ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 66ಕ್ಕೆ ಏರಿದೆ. ಹಾಗೇ 24 ಗಂಟೆಯಲ್ಲಿ 164 ಮಂದಿ ಗುಣಮುಖರಾಗಿದ್ದಾರೆ. ಅಲ್ಲಿಗೆ ಒಟ್ಟು ಡಿಸ್​ಚಾರ್ಜ್​ ಆದವರು 2605.

ಇಂದು ಯಾದಗಿರಿಯಲ್ಲಿ ಅತಿ ಹೆಚ್ಚು ಅಂದರೆ 61 ಜನರಲ್ಲಿ ಕರೊನಾ ದೃಢಪಟ್ಟಿದೆ. ಅದನ್ನು ಹೊರತುಪಡಿಸಿದರೆ ಬೆಂಗಳೂರು ನಗರ 29, ದಕ್ಷಿಣ ಕನ್ನಡ 23, ಕಲಬುರಗಿ 10, ಬೀದರ್​ 9, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ 2, ಚಿಕ್ಕಬಳ್ಳಾಪುರ, ಮೈಸೂರು, ಧಾರವಾಡದಲ್ಲಿ ತಲಾ ಎರಡು ಮತ್ತು ಬಾಗಲಕೋಟೆ, ತುಮಕೂರು, ಚಾಮರಾಜನಗರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

ಇಂದು ಕಂಡು ಬಂದ ಹೊಸ ಪ್ರಕರಣಗಳಲ್ಲಿ 24 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ಹಾಗೂ 91 ಜನರು ಅಂತಾರಾಜ್ಯ ಪ್ರಯಾಣಿಕರು.