ಐಜ್ವಾಲ್, ಮಿಜೋರಾಂ: ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 18 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್ ಮತ್ತು 1.21 ಕೋಟಿ ರೂ. ನಗದು ವಶಪಡಿಸಿಕೊಂಡ ಬೆನ್ನಲ್ಲೇ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಐವರು ಮೈನಾಮರ್ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಶನಿವಾರ (ನ.11) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಠುಸ್ಸಾದ ಬಾಬರ್ ಅಜಾಮ್ ಪ್ಲ್ಯಾನ್: ವಿಶ್ವಕಪ್ನಿಂದ ಪಾಕ್ ಔಟ್, ಸೆಮೀಸ್ನಲ್ಲಿ ಭಾರತಕ್ಕೆ ಕಿವೀಸ್ ಸವಾಲು
ಸುಳಿವಿನ ಮೇರೆಗೆ ಅಸ್ಸಾಂ ರೈಫಲ್ಸ್ ಮತ್ತು ರಾಜ್ಯ ಪೊಲೀಸರ ಜಂಟಿ ತಂಡಗಳು ಮಿಜೋರಾಂ-ಮೈನಾಮರ್ ಗಡಿಯಲ್ಲಿರುವ ಝೋಟ್ ಮತ್ತು ಝೋಖವ್ತಾರ್ ಗ್ರಾಮಗಳಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, 2.61 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿವೆ ಎಂದು ಹೇಳಿದರು.
ಅಸ್ಸಾಂ ರೈಫಲ್ಸ್ ಅಧಿಕಾರಿಗಳ ಪ್ರಕಾರ, ವಶಪಡಿಸಿಕೊಂಡ ಹೆರಾಯಿನ್‌ನ ಮಾರುಕಟ್ಟೆ ಮೌಲ್ಯ 18.30 ಕೋಟಿ ರೂ. ಎಂದು ಅಂದಾಜಿಸಲಾಗಿದೆ ಮತ್ತು ಲೆಕ್ಕಕ್ಕೆ ಸಿಗದ ನಗದು ಭಾರತೀಯ ಕರೆನ್ಸಿ ನೋಟುಗಳಲ್ಲಿದೆ. 500, 200, 100 ಮತ್ತು 50 ರೂ. ಮುಖಬೆಲೆಯ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಭಾರತ ಯಾವಾಗಲೂ ಪ್ಯಾಲೆಸ್ತೇನ್ ಜೊತೆಗಿತ್ತು; ಪಿಣರಾಯಿ ವಿಜಯನ್ ನೆಹರು ನೀತಿ ಹೊಗಳಿ ಕಾಂಗ್ರೆಸ್ ನಡೆ ಟೀಕಿಸಿದ ಕೇರಳ ಸಿಎಂ
ಜಂಟಿ ಕಾರ್ಯಾಚರಣೆಯಲ್ಲಿ ಐವರು ಮೈನಾಮರ್ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳನ್ನು ಮತ್ತು ವಶಪಡಿಸಿಕೊಂಡ ಅಕ್ರಮ ವಸ್ತುಗಳನ್ನು ಕಾನೂನು ಕ್ರಮಗಳಿಗಾಗಿ ಚಂಫೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು,(ಏಜೆನ್ಸೀಸ್).