ನ್ಯೂಸ್

ಮನೆಯೊಂದರಲ್ಲಿ ಸ್ಫೋಟಿಸಿತು ಕಚ್ಚಾ ಬಾಂಬ್​ - ಸ್ಥಳದಲ್ಲೇ ಮೃತಪಟ್ರು ಇಬ್ರು, ಇನ್ನಿಬ್ಬರಿಗೆ ಗಾಯ

ಕೋಲ್ಕತ: ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ ವ್ಯಾಪ್ತಿಯ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸಾಜಿದ್ ಮತ್ತು ರಾಜಾ ಎಂದು ಗುರುತಿಸಲಾಗಿದೆ. ಕಮರ್​ಹಟಿ ಗೋಲಾಘಾಟ್ ಎಂಬಲ್ಲಿ ಈ ದುರಂತ ನಡೆದಿದೆ. ಕಮರ್​ಹಟಿ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಗಂಭೀರ ಗಾಯಗೊಂಡು ಬಿದ್ದಿದ್ದ ನಾಲ್ವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾರಿ ಮಧ್ಯೆ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳಿಗೆ ಸಾಗರ್ ದತ್ತಾ ಮೆಡಿಕಲ್ ಕಾಲೇಜು ಹಾಸ್ಪಿಟಲ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ. ದುರಂತಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. (ಏಜೆನ್ಸೀಸ್)