ನ್ಯೂಸ್

ದಕ್ಷಿಣ ಕಾಶ್ಮೀರದಲ್ಲಿ ಲಷ್ಕರ್​ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ರಕ್ಷಣಾ ಸಿಬ್ಬಂದಿ

lakshmihegde

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯ ಗುಂಡಿನ ದಾಳಿಗೆ ಲಷ್ಕರ್​ ಎ ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಬಿಜ್​ಬೆಹಾರಾದ ಸಂಗಮ್​ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಅವರನ್ನು ಹುಡುಕುವ ಕಾರ್ಯಾಚರಣೆ ನಡೆಯುತ್ತಿತ್ತು. ಇದೇ ವೇಳೆ ಉಗ್ರರು ಮತ್ತು ರಕ್ಷಣಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು.

ಮೃತ ಉಗ್ರರಿಬ್ಬರೂ ಲಷ್ಕರ್​ ಎ ತೊಯ್ಬಾ ಸಂಘಟನೆಗೆ ಸೇರಿದವರು. ರಕ್ಷಣಾ ಸಿಬ್ಬಂದಿಗೆ ಯಾರಿಗೂ ಏನೂ ಅಪಾಯ ಆಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಉಗ್ರರಿಂದ ಎಕೆ 47 ಸೇರಿ ಮಾರಕ ಅಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)