ನ್ಯೂಸ್

ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ರಮೇಶ್​ ಕುಮಾರ್​​ ಬಿ ಎಡಮೋಳೆ

ಅನಂತನಾಗ್: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿರ್​ಹಮಾದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶುಕ್ರವಾರ ನಸುಕಿನಲ್ಲಿ ಇಬ್ಬರು ಲಷ್ಕರ್ ಏ ತೊಯ್ಬಾ (ಎಲ್​ಇಟಿ) ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರಳಿಸಿವೆ.

ಗುರುವಾರ ರಾತ್ರಿಯೇ ಕಾರ್ಯಾಚರಣೆ ತೀವ್ರ ಸ್ವರೂಪ ಪಡೆದಿದ್ದು, ಉಗ್ರರು ದಾಳಿ ಆರಂಭಿಸಿದಾಗ ಭದ್ರತಾಪಡೆಗಳು ಪ್ರತಿದಾಳಿಯನ್ನು ನಡೆಸಿವೆ. ಉಗ್ರರಿದ್ದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಇತರೆ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಉಗ್ರ ಶೋಧ ಮತ್ತು ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್)