ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಇಬ್ಬರು ದುರ್ಮರಣ, ಇನ್ನಿಬ್ಬರಿಗೆ ಗಂಭೀರ ಗಾಯ

lakshmihegde

ಬಳ್ಳಾರಿ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ರಾಂಪುರ ಸಮೀಪ ನಡೆದಿದೆ.

ನಿನ್ನೆ ಸಂಜೆಯೇ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಅಪಘಾತವಾದಾಗ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು, ಆಸ್ಪತ್ರೆಗೆ ಸೇರಿಸುವ ಬದಲು ವಿಡಿಯೋ ಮಾಡುವುದರಲ್ಲಿ ತೊಡಗಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.

ಬಳ್ಳಾರಿ ನಗರದ ತನುಜಾ ಮತ್ತು ರವಿ ಮೃತರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.( ದಿಗ್ವಿಜಯ ನ್ಯೂಸ್​)