ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಈ ವಿಷಯವನ್ನು ಹಿರಿಯ ಪೊಲೀಸ್ ಅಧಿಕಾರಿ ಬಹಿರಂಗಪಡಿಸಿದ್ದಾರೆ. ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಬಂಡಿಪೋರಾದಲ್ಲೂ ಉಗ್ರನ ಹತ್ಯೆ: ಮತ್ತೊಂದೆಡೆ, ಕೇಂದ್ರಾಡಳಿತ ಪ್ರದೇಶವಾದ ಬಂಡಿಪೋರಾದ ಅರ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಭಾನುವಾರ ರಾತ್ರಿ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸಿವೆ. ಇದನ್ನು ಗಮನಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.