ನ್ಯೂಸ್

100ಕ್ಕೂ ಹೆಚ್ಚು ಬಾರಿ ಇರಿದು ಈತನ ಕಥೆ ಮುಗಿಸಿದ್ರು!

ಪಾಟ್ನಾ: ಯುವಕನೊಬ್ಬನನ್ನು 100ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದ ಘಟನೆ ಬಿಹಾರದಲ್ಲಿ ನಡೆದಿದೆ.

ಚಿಂಟು(20) ಮೃತ. ಚಿಂಟುವಿನ ಮುಖ ಹಾಗೂ ದೇಹದ ಮೇಲೆ ಚಾಕುವಿನಿಂದ ತಿವಿದ ಗುರುತುಗಳಿವೆ. ಈತನ ಶವ ಪೊದೆಯೊಂದರಲ್ಲಿ ಪತ್ತೆಯಾಗಿದೆ.

ಕಳೆದ ಒಂದು ವಾರದಿಂದ ಚಿಂಟು ಮನೆಯಿಂದ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಆತನ ಮನೆಯವರು ನಾಪತ್ತೆ ಪ್ರಕರಣ ಕೂಡ ದಾಖಲಿಸಿದ್ದರು. ಇದೀಗ ಪೊದೆಯೊಂದರಲ್ಲಿ ಆತ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಪೊದೆಗೆ ಬಿಸಾಕಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಚಿಂಟು ಹಾಗೂ ನೆರೆಮನೆಯ ರಾಮ ಮಹತೋ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಹೀಗಾಗಿ ಆತನೇ ಚಿಂಟುವನ್ನು ಕೊಲೆ ಮಾಡಿದ್ದಾನೆ ಎಂದು ಸಹೋದರ ಗಂಭೀರ ಆರೋಪ ಮಾಡಿದರು. ಸ್ಕ್ರ್ಯಾಪ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ಚಿಂಟುವಿಗೆ ತಿಂಗಳ ಹಿಂದೆಯಷ್ಟೇ ಮದುವೆಯಾಗಿದೆ.

ಸದ್ಯ ಮೃತನ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ವಿವರಿಸಿದರು.