ನ್ಯೂಸ್

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

ಬೆಂಗಳೂರು: ಉತ್ಥಾನ ಮಾಸಪತ್ರಿಕೆಯು ಕಳೆದ 5 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯ 2024ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳನ್ನು ಆಹ್ವಾನಿಸಿದೆ. ಕಥೆಯು 3 ಸಾವಿರ ಪದಗಳನ್ನು ಮೀರಬಾರದು. ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು. ಕಥೆ ತಲುಪಲು ಕೊನೆಯ ದಿನಾಂಕ ಅ.10, 2024.

ಆಯ್ಕೆಯಾದ ಕಥೆಗಳಿಗೆ ಮೊದಲನೆಯ ಬಹುಮಾನ 15 ಸಾವಿರ, ಎರಡನೆಯ ಬಹುಮಾನ 12 ಸಾವಿರ, ಮೂರನೆಯ ಬಹುಮಾನ 10 ಸಾವಿರ, 5 ಕಥೆಗಳಿಗೆ ಮೆಚ್ಚುಗೆಯ ಬಹುಮಾನಗಳು ತಲಾ 2 ಸಾವಿರ ನೀಡಲಾಗುವುದು.

ವಿಳಾಸ: ಸಂಪಾದಕರು, ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2024, ಕೇಶವ ಶಿಲ್ಪ, ಕೆಂಪೇಗೌಡನಗರ, ಬೆಂಗಳೂರು - 560 004 ದೂ: 77954 41894, ಇ-ಮೇಲ್:utthanakathaspardhe@gmail.com

ಕಥಾ ಸ್ಪರ್ಧೆಯ ನಿಯಮಗಳು

ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಯನ್ನು ಪೋಸ್ಟ್ ಮೂಲಕ ಅಥವಾ ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕವೂ ಕಳುಹಿಸಬಹುದು.

ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು.

ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ಉತ್ಥಾನದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರವ್ಯವಹಾರ ಇರುವುದಿಲ್ಲ. ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.