ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್ ಪ್ರಕರಣ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಸಂಖ್ಯೆ ಏರುತ್ತಲೇ ಇದೆ. ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 11 ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ 47 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ಸೋಂಕು ದಾಖಲಾದ ಊರುಗಳೆಂದರೆ: ಬೆಳಗಾವಿಯಲ್ಲಿಯಲ್ಲಿ ನಾಲ್ವರು, ಬೆಂಗಳೂರು ನಗರದಲ್ಲಿ ಮೂರು, ಕಲಬುರ್ಗಿಯಲ್ಲಿ ಎರಡು, ಮೈಸೂರು ಮತ್ತು ವಿಜಯಪುರ ತಲಾ ಒಂದು ಪ್ರಕರಣಗಳು ದಾಖಲಾಗಿವೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.