ನ್ಯೂಸ್

23ಕ್ಕೆ ಜಿಎಂಸಿಎ ಹೊಸ ಶಾಖೆ ಆರಂಭ

ಗ್ರೇಟ್ ಮೈಂಡ್ಸ್ ಚೆಸ್ ಅಕಾಡೆಮಿ (ಜಿಎಂಸಿಎ) ಮೇ 23ರಂದು ಸರಸ್ವತಿಪುರಂನಲ್ಲಿ ಹೊಸ ಶಾಖೆ ಪ್ರಾರಂಭಿಸುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥ ಜಿ.ಎಂ.ತೇಜ್‌ಕುಮಾರ್ ತಿಳಿಸಿದರು.

ರಾಜ್ಯದ ಮೊದಲ ಗ್ರಾಂಡ್ ಮಾಸ್ಟರ್ ಎಂ.ಎಸ್.ತೇಜಕುಮಾರ್ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಕಾಡೆಮಿಯ ಅನೇಕರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಪ್ರಾದೇಶಿಕ ಪ್ರತಿಭೆಗಳನ್ನು ಬೆಳೆಸುವ ಉದ್ದೇಶದಿಂದ ಈ ಶಾಖೆ ಆರಂಭಿಸಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೆಚ್ಚಿನ ಮಾಹಿತಿಗೆ ಮೊ.ಸಂ 8660230481 ಸಂಪರ್ಕಿಸಲು ಕೋರಿದರು. ಸುದ್ದಿಗೋಷ್ಠಿಯಲ್ಲಿ ಜಯಶ್ರೀ ಇದ್ದರು.