ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಜು.23ರಿಂದ ಆ.8ರವರೆಗೆ ರಾಜ್ಯ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾದ ಹಾತ್ ಕರ್ಗ್ ಉತ್ಸವವನ್ನು ನನ್ನ ಕೈಮಗ್ಗ ನನ್ನ ಹೆಮ್ಮೆ ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ ಎಂದು ಕಾವೇರಿ ಹ್ಯಾಂಡ್‌ಲೂಮ್ಸ್ ವ್ಯವಸ್ಥಾಪಕ ಜಿ.ಪಿ.ಶ್ರೀನಿವಾಸ ಮೂರ್ತಿ ತಿಳಿಸಿದರು.
ಜು.23ರಂದು ಸಂಜೆ 4ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸುವರು.ಶಾಸಕ ಎ.ಬಿ.ರಮೇಶ ಬಂಡಿ ಸಿದ್ದೇಗೌಡ, ಡಾ.ಪುಷ್ಪಾ ಅಮರ್‌ನಾಥ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉತ್ಸವದಲ್ಲಿ ಶೇ.20ರ ರಿಯಾಯಿತಿ ದರದಲ್ಲಿ ಉತ್ಪನ್ನಗಳು ಸಿಗಲಿವೆ. ರಾಜ್ಯದ ವಿವಿಧ ಜಿಲ್ಲೆಗಳಾದ ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಗದಗ, ಬಾಗಲಕೋಟೆ, ಗುಲ್ಬರ್ಗ, ಮೈಸೂರು, ಉತ್ತರ ಕನ್ನಡ ಮೊದಲಾದ ಕಡೆಗಳಿಂದ ಸುಮಾರು 75ಕ್ಕೂ ಹೆಚ್ಚು ಕೈಮಗ್ಗ ನೇಕಾರರು, ಕುಶಲ ಕರ್ಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು. ಸುದ್ದಿಗೋಷ್ಠಿಯಲ್ಲಿ ಯೋಜನಾಧಿಕಾರಿ ಶಿವನಂಜಸ್ವಾಮಿ, ಸಂಯೋಜನಾಧಿಕಾರಿ ರಾಕೇಶ್ ರೈ ಇತರರು ಇದ್ದರು.