ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ 
ನ್ಯೂಸ್

ಆರೇ ತಿಂಗಳಲ್ಲಿ 24 ರೈತರ ಆತ್ಮಹತ್ಯೆ ?

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲೇ 24 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಎಲ್ಲರಿಗೂ ಪರಿಹಾರ ವಿತರಿಸಲಾಗಿದೆಯಾ ?, ವಿತರಣೆ ಆಗದಿದ್ದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಡಾ. ಆರ್.ಸೆಲ್ವಮಣಿ, ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ 24 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ ನಾಲ್ಕು ಅರ್ಜಿಗಳು ತಿರಸ್ಕೃತಗೊಂಡಿವೆ. 16 ಪ್ರಕರಣಗಳಿಗೆ ಪರಿಹಾರವನ್ನೂ ವಿತರಿಸಲಾಗಿದೆ. ಎಸ್‌ಎಫ್‌ಎಲ್ ವರದಿ, ಎಸಿ ಕಮಿಟಿಯಲ್ಲಿ ತೀರ್ಮಾನಿಸಲು ತಲಾ ಒಂದು ಪ್ರಕರಣಗಳು ಬಾಕಿ ಇದ್ದರೆ, ಅಂತಿಮ ವರದಿಗಾಗಿ ಎರಡು ಬಾಕಿ ಇವೆ ಎಂದರು.