ನ್ಯೂಸ್

ಶ್ರದ್ಧೆ ಇದ್ದರೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಬಹುದು

ಅವಿನಾಶ್ ಜೈನಹಳ್ಳಿ

ಮೈಸೂರು: ಶ್ರದ್ಧೆ ಇದ್ದರೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಬಹುದು ಎಂದು ಅಪೋಲೋ ಆಸ್ಪತ್ರೆಯ ಪ್ಲಾಸ್ಟಿಕ್ ಮತ್ತು ಮೈಕ್ರೋವಾಸ್ಕುಲರ್ ಸರ್ಜನ್ ಡಾ.ನಾರಾಯಣ ಹೆಗ್ಡೆ ತಿಳಿಸಿದರು.

ನಗರದ ಶಾರದಾವಿಲಾಸ ಫಾರ್ಮಸಿ ಕಾಲೇಜಿನ ಎಸ್.ಚಿನ್ನಸ್ವಾಮಿ ಶೆಟ್ಟಿ ಸಮ್ಮೇಳನದ ಸಭಾಂಗಣದಲ್ಲಿ ಗುರುವಾರ ನಡೆದ ‘ವೈದ್ಯಕೀಯ ಪ್ರಯಾಣ ಮತ್ತು ಒತ್ತಡವನ್ನು ನಿವಾರಿಸುವುದು ಹೇಗೆ?’ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕಾರ ಜೀವನ ವನ್ನು ಉತ್ತಮ ಮಟ್ಟಕ್ಕೆ ಕೊಂಡೋಯ್ಯುತ್ತದೆ. ವೈದ್ಯಕೀಯ ವೃತ್ತಿ ಜೀವನದಲ್ಲಿ ಅನೇಕ ಸವಾಲುಗಳ ನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ವೈದ್ಯಕೀಯ ವೃತ್ತಿಯಲ್ಲಿ ಕಾರ್ಯನಿ ರ್ವಹಿಸುವ ವಿದ್ಯಾರ್ಥಿಗಳು ಸವಾಲನ್ನು ಎದುರಿಸಲು ಸಿದ್ದರಾಗಬೇಕು ಎಂದರು.

ವೃತ್ತಿ ಗೌರವವನ್ನೂ ಕಾಪಾಡಿಕೊಂಡು ಕೆಲಸ ಮಾಡುವವರು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ಶಾರದಾವಿಲಾಸ ಫಾರ್ಮಸಿ ಕಾಲೇಜಿನ ಮುಖ್ಯಸ್ಥ ಡಾ.ಎನ್.ವೆಂಕಟ್ ರಾವ್ ಮಾತನಾಡಿ, ಶ್ರೀಮಂತ ವ್ಯಕ್ತಿಗಳು ನೆಮ್ಮದಿಯಾಗಿ ನಿದ್ರಿಸುತ್ತಿಲ್ಲ. ಆದರೆ, ಮಧ್ಯಮ ವರ್ಗದ ಜನರು ನೆಮ್ಮದಿ ಯಾಗಿ ನಿದ್ರಿಸುತ್ತಿದ್ದಾರೆ. ಆದ್ದರಿಂದ ಜೀವನದಲ್ಲಿ ಹಣ ಮುಖ್ಯವಲ್ಲ. ಆರೋಗ್ಯ ಮತ್ತು ನೆಮ್ಮದಿ ಮುಖ್ಯ ಎಂದರು.

ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಚಾರ್ ಜೋಶಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.