ನ್ಯೂಸ್

ಭೀಕರ ರಸ್ತೆ ಅಪಘಾತ: ಬಸ್ ಪಲ್ಟಿಯಾಗಿ 25 ಜನ ಸಾವು, 27 ಜನರಿಗೆ ಗಾಯ..accident

accident :ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಬುಧವಾರ ಮುಂಜಾನೆ ಪ್ರಯಾಣಿಕರ ಬಸ್ ಪಲ್ಟಿಯಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು,  27 ಜನರಿಗೆ ಗಾಯಗೊಂಡಿದ್ದಾರೆ.  ಈ  ಅಪಘಾತದ ಬಗ್ಗೆ ತಾಲಿಬಾನ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗೃಹ ಸಚಿವಾಲಯದ ವಕ್ತಾರ ಅಬ್ದುಲ್ ಮಟಿನ್ ಕಾನಿ ಮಾತನಾಡಿ, ಬಸ್ ದಕ್ಷಿಣ ಅಫ್ಘಾನಿಸ್ತಾನದ ಹೆಲ್ಮಂಡ್ ಮತ್ತು ಕಂದಹಾರ್‌ನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಅಜಾಗರೂಕ ಚಾಲನೆಯಿಂದಾಗಿ ಅಪಘಾತ ಸಂಭವಿಸಿದ್ದು, ಇದರಲ್ಲಿ 27 ಜನರು ಗಾಯಗೊಂಡಿದ್ದಾರೆ.

ಒಂದು ವಾರದ ಹಿಂದೆ, ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಸುಮಾರು 80 ಜನರು ಸಾವನ್ನಪ್ಪಿದ್ದರು. ಇದೀಗ ಭೀಕರ ಅಪಘಾತ ಸಂಭವಿಸಿದೆ ಎಂದಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಅಪಘಾತಗಳು ಸಂಭವಿಸಲು ಇದೇ ಕಾರಣ!

ಅಫ್ಘಾನಿಸ್ತಾನದಲ್ಲಿ ಕೆಟ್ಟ ರಸ್ತೆಗಳು, ಹೆದ್ದಾರಿಗಳಲ್ಲಿ ಅಪಾಯಕಾರಿ ಚಾಲನೆ ಮತ್ತು ನಿಯಮಗಳ ನಿರ್ಲಕ್ಷ್ಯ ಸೇರಿದಂತೆ ಅಪಘಾತಗಳಿಗೆ ಹಲವು ಕಾರಣಗಳಿವೆ. ಅಫ್ಘಾನಿಸ್ತಾನದಲ್ಲಿ ಹೆಚ್ಚಿನ ಬಸ್ಸುಗಳು ಹಳೆಯವು ಮತ್ತು ತಾಂತ್ರಿಕವಾಗಿ ಅಸುರಕ್ಷಿತವಾಗಿವೆ ಮತ್ತು ಇದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ.