ತರೀಕೆರೆ: ಅಜ್ಜಂಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ಸೋಮವಾರ ಪಕ್ಷೇತರ ಸೇರಿ ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ಒಟ್ಟು 25 ನಾಮಪತ್ರಗಳು ಸಲ್ಲಿಕೆಯಾಗಿವೆೆ.
ಹಿಂದುಳಿದ ವರ್ಗ (ಎ) ಮಹಿಳಾ ಸ್ಥಾನಕ್ಕೆ ಮೀಸಲಿಟ್ಟ 1ನೇ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ.ಕವಿತಾ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಲಾ, ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ 2ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೋಗಿ ಪ್ರಕಾಶ್, ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟ 3ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಸಾರ್ ಅಹಮದ್, ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಶಿವಾನಂದ್, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಷಡಾಕ್ಷರಿ ಮತ್ತು ಜಿ.ಆಸಿಪ್, ಅನುಸೂಚಿತ ಜಾತಿಗೆ ಮೀಸಲಿರಿಸಿದ 5ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಅಣ್ಣಪ್ಪ, ಬಿಜೆಪಿ ಅಭ್ಯರ್ಥಿಯಾಗಿ ಆರ್.ಪ್ರಕಾಶ್, ಆಮ್ ಆದ್ಮಿ ಪಕ್ಷದಿಂದ ಸುನಂದ, ಪಕ್ಷೇತರ ಅಭ್ಯರ್ಥಿಗಳಾಗಿ ಬಿ.ಆನಂದಕುಮಾರ್ ಮತ್ತು ಶ್ರೀನಿವಾಸ್, ಹಿಂದುಳಿದ ವರ್ಗಗಳ (ಎ) ಸ್ಥಾನಕ್ಕೆ ಮೀಸಲಿಟ್ಟ 6ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ, ಬಿಜೆಪಿಯಿಂದ ಬಿ.ರಂಗಸ್ವಾಮಿ, ಸಾಮಾನ್ಯ ಮಹಿಳೆಗೆ ಮೀಸಲಿಟ್ಟ 7ನೇ ವಾರ್ಡ್‌ಗೆ ಪಕ್ಷೇತರ ಅಭ್ಯರ್ಥಿಯಾಗಿ ಸಿ.ಎಲ್.ರೇಖಾ, ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಸಿದ್ದಾರೆ.
ಹಿಂದುಳಿದ ವರ್ಗ (ಬಿ) ಸ್ಥಾನಕ್ಕೆ ಮೀಸಲಿರಿಸಿದ 8ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ಜೆ.ತೀರ್ಥಪ್ರಸಾದ್, ಎಂ.ಅಶ್ವಿನಿ ಪಕ್ಷೇತರ, ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟ 9ನೇ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ವಿ.ಮಧುಸೂದನ್, ಸಾಮಾನ್ಯ ಮಹಿಳಾ ಸ್ಥಾನಕ್ಕೆ ಮೀಸಲಾಗಿರುವ 10ನೇ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಯತೀಶ್ , ಸಾಮಾನ್ಯ ಮಹಿಳಾ ಸ್ಥಾನಕ್ಕೆ ಮೀಸಲಿಟ್ಟ 11ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಕವಿತಾ, ಬಿಜೆಪಿ ಅಭ್ಯರ್ಥಿಯಾಗಿ ಎಸ್.ಎನ್.ಶೋಭಾ ನಾಮಪತ್ರ ಸಲ್ಲಿಸಿದ್ದಾರೆ. ಅಧಿಸೂಚನೆ ಘೋಷಣೆಯಾದ ದಿನದಿಂದ ಈವರೆಗೆ ಒಟ್ಟು 36 ನಾಮಪತ್ರ ಸ್ವೀಕೃತಿಯಾಗಿದೆ ಎಂದು ಚುನಾವಣಾಧಿಕಾರಿ ಕೆ.ಎಂ.ವಿಜಯಕುಮಾರ್ ತಿಳಿಸಿದ್ದಾರೆ.