ನ್ಯೂಸ್

26/11 ದಾಳಿಯ ಮಾಸ್ಟರ್​ಮೈಂಡ್​​ಗೆ 31 ವರ್ಷ ಜೈಲುಶಿಕ್ಷೆ!

ನವದೆಹಲಿ: 26/11 ಮುಂಬೈ ದಾಳಿಯ ಮಾಸ್ಟರ್​ ಮೈಂಡ್ ಹಫೀಜ್​ ಸಯೀದ್​ಗೆ 31 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ. ಇಂದು ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಈ ತೀರ್ಪನ್ನು ನೀಡಿದೆ.

ಲಷ್ಕರ್ ಈ ತೈಬಾ ಉಗ್ರ ಸಂಘಟನೆಯ ಸಂಸ್ಥಾಪಕ ಹಫೀಜ್​ ಸಯೀದ್​ಗೆ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಆತನಿಗೆ ಸಂಬಂಧಿಸಿದ ಎಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಿದೆ. ಮಾತ್ರವಲ್ಲ ಆತ ಅನಧಿಕೃತವಾಗಿ ಕಟ್ಟಿರುವ ಮಸೀದಿ ಹಾಗೂ ಮದರಸಗಳನ್ನು ಕೂಡ ವಶಕ್ಕೆ ಪಡೆಯುವಂತೆ ಆದೇಶ ನೀಡಲಾಗಿದೆ.

70 ವರ್ಷದ ಹಫೀಜ್​ ಉಗ್ರ ಸಂಘಟನೆಗಳಿಗೆ ಹಣ ನೀಡುತ್ತಿದ್ದ ಹಲವು ಕೇಸುಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಶಿಕ್ಷೆಗಳನ್ನು ವಿಧಿಸಲಾಗಿದ್ದು, 2020ರಲ್ಲಿ ಈತನನ್ನು 15 ವರ್ಷಗಳ ಜೈಲುಶಿಕ್ಷೆಗೆ ಗುರಿ ಮಾಡಲಾಗಿತ್ತು.

ಮುಂಬೈನಲ್ಲಿ 2008ರ ನವೆಂಬರ್​ 26ರಂದು ನಡೆದು ಉಗ್ರದಾಳಿಯಲ್ಲಿ 166 ಮಂದಿ ಸಾವಿಗೀಡಾಗಿದ್ದು, 238 ಜನರು ಗಾಯಗೊಂಡಿದ್ದರು. ಹಫೀಜ್ ಸಯೀದ್​ನನ್ನು 2019ರಲ್ಲಿ ಬಂಧಿಸಲಾಗಿತ್ತು. ಅದಕ್ಕೂ ಮೊದಲು 2001ರಿಂದ ಒಟ್ಟು 8 ಸಲ ಹಫೀಜ್​ನನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. (ಏಜೆನ್ಸೀಸ್)