ಗದಗ: ಸೂಕ್ತ ಮೂಲಕ ಸೌಕರ್ಯ ಕಲ್ಪಿಸಿಕೊಡುವಂತೆ ಸಾರ್ವಜನಿಕರು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಗುತ್ತಿಗೆದಾರ, ನನಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಹೀಗಾಗಿ 'ಕನ್ಯಾ ಭಾಗ್ಯ' ಜಾರಿಗೊಳಿಸುವಂತೆ ಪಿಡಿಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾನೆ. ಇದನ್ನೂ ಓದಿ: ಫಸ್ಟ್ ನೈಟ್ಗೆ ಶುಭ ಕೋರಿ ಬ್ಯಾನರ್ ಅಳವಡಿಸಿದ ವರನ ಸ್ನೇಹಿತರು!
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಇದೀಗ ಮದುವೆಯಾಗಲು ಹುಡುಗಿ ಹುಡುಕಿ ಸುಸ್ತಾದ ಗುತ್ತಿಗೆದಾರ ಮುತ್ತು ಹೂಗಾರ(28) ಎಂಬಾತ 'ಕನ್ಯಾ ಭಾಗ್ಯ' ಜಾರಿಗೊಳಿಸಲು ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಪಂಚಾಯತಿ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾನೆ.
ತಿಂಗಳಿಗೆ 50 ಸಾವಿರ ರೂಪಾಯಿ ಆದಾಯವಿದ್ದರೂ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ನನಗೆ ಸಹೋದರ, ಸಹೋದರಿ ಯಾರೂ ಇಲ್ಲ. ಪ್ರತಿ ಹಳ್ಳಿ-ಹಳ್ಳಿ ಸುತ್ತಾಡಿ ಕನ್ಯೆ ನೋಡಿದ್ದೇನೆ. ಒಳ್ಳೆಯ ಆದಾಯವಿದೆ, ಆದರೆ ಸರ್ಕಾರಿ ಉದ್ಯೋಗ ಇಲ್ಲವೆಂದು ಯಾರೂ ಹೆಣ್ಣು ಕೊಡುತ್ತಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆ ಬಂದಿದೆ. ನನಗೆ ಸಂಗಾತಿಯನ್ನು ಹುಡುಕಿ ಕೊಡಿ ಎಂದು ಗುತ್ತಿಗೆದಾರ ಅಳಲು ತೋಡಿಕೊಂಡಿದ್ದಾನೆ.
ಇದನ್ನೂ ಓದಿ: ಫ್ರೀ ಬಸ್ ಲಾಭ ಪಡೆದ ವಿವಾಹಿತೆ; 11 ತಿಂಗಳ ಕಂದಮ್ಮನನ್ನು ಬಿಟ್ಟು ಪ್ರಿಯಕರನ ಭೇಟಿಗೆ 300 ಕಿ.ಮೀ ಪ್ರಯಾಣ!
ಮದುವೆಯಾಗಲು ಯಾವುದೇ ಜಾತಿಯ ಕನ್ಯೆಯಾದರೂ ಪರವಾಗಿಲ್ಲ ಎಂದು ಗುತ್ತಿಗೆದಾರ ಮುತ್ತು ಹೂಗಾರ ಹೇಳಿದ್ದಾನೆ. ಈತನ ಮನವಿ ಕೇಳಿಕೊಂಡಿರುವ ಪಿಡಿಒ, ಹಿರಿಯ ಅಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ್ದಾರೆ.