ನವದೆಹಲಿ: ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾ ವಿಮಾನ ನಿಲ್ದಾಣದಲ್ಲಿ ನವೆಂಬರ್ 25 ರಂದು ಬಂಧಿಸಿದ್ದಾರೆ. ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ರಕ್ಷಣೆಗಾಗಿ ಕೆಲಸ ಮಾಡಲು ಪ್ರಸಿದ್ಧರಾಗಿದ್ದರು. ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದ್ದು ಜಾಮೀನು ನಿರಾಕರಿಸಲಾಗಿದೆ. ಚಿನ್ಮೋಯ್ ಕೃಷ್ಣ ದಾಸ್ ಅವರು ಬಂಧನದ ನಂತರ ಪ್ರತಿಭಟನೆಗಳು(Bangladesh Protest) ಪ್ರಾರಂಭವಾದವು. ಅಲ್ಲದೆ ಇಸ್ಕಾನ್ ಅನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾದೇಶದ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು ಗೊತ್ತೆ ಇದೆ.
ಇದನ್ನು ಓದಿ: ಇಸ್ಕಾನ್ ನಿಷೇಧಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ; ವಿಚಾರಣೆ ವೇಳೆ ಹೈಕೋರ್ಟ್ ಹೇಳಿದಿಷ್ಟು.. | ISKCON
ಆದರೀಗ ಮತ್ತೊಂದು ಸುದ್ದಿ ಹೊರಬಂದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ಮತ್ತೊಬ್ಬ ಹಿಂದೂ ಸನ್ಯಾಸಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಶನಿವಾರ(ನವೆಂಬರ್ 30) ತಿಳಿಸಿವೆ. ಬಂಧಿತ ಪಾದ್ರಿಯನ್ನು ಶ್ಯಾಮ್ ದಾಸ್ ಪ್ರಭು ಎಂದು ಗುರುತಿಸಲಾಗಿದೆ. ಶ್ಯಾಮ್ ದಾಸ್ ಪ್ರಭು ಅವರು ಜೈಲಿನಲ್ಲಿರುವ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಭೇಟಿಯಾಗಲು ಹೋಗಿದ್ದರು ಎಂದು ವರದಿಯಾಗಿದೆ. ಯಾವುದೇ ಅಧಿಕೃತ ವಾರಂಟ್ ಇಲ್ಲದೇ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶ್ಯಾಮ್ ದಾಸ್ ಪ್ರಭು ಅವರ ಬಂಧನದ ವಿಚಾರವನ್ನು ಇಸ್ಕಾನ್ ಕೊಲ್ಕತಾದ ಉಪಾಧ್ಯಕ್ಷ ಮತ್ತು ವಕ್ತಾರರಾದ ರಾಧರಮ್ ದಾಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಋಎ. ಇನ್ನೊಬ್ಬ ಬ್ರಹ್ಮಚಾರಿ ಶ್ರೀ ಶ್ಯಾಮ್ ದಾಸ್ ಪ್ರಭು ಅವರನ್ನು ಇಂದು ಚಟ್ಟೋಗ್ರಾಮ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರ ಬಂಧನದ ಬಳಿಕ ಇಸ್ಕಾನ್ ಅಂತಾರಾಷ್ಟ್ರೀಯ ಸಮುದಾಯವು ಮಧ್ಯಪ್ರವೇಶಿಸಬೇಕೆಂದು ಕರೆ ನೀಡಿದ್ದದೆ. ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರ ರಕ್ಷಣೆಗೆ ವಿಶ್ವಸಂಸ್ಥೆ ಕ್ರಮಕೈಗೊಳ್ಳಬೇಕು ಎಂದು ಇಸ್ಕಾನ್ ವಕ್ತಾರರು ಹೇಳಿದ್ದಾರೆ.(ಏಜೆನ್ಸೀಸ್)