Suresh kumar 
ನ್ಯೂಸ್

ಮೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ?; ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Webdesk - Ravikanth

ಬೆಂಗಳೂರು: ನಿನ್ನೆಯಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದ ರಾಜ್ಯ ಸರ್ಕಾರ ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನೂ ಪ್ರಕಟ ಪಡಿಸಿದೆ. ಇದೀಗ ಘೋಷಿಸಿರುವ ವೇಳಾಪಟ್ಟಿ ಪ್ರಕಾರ ಮೇ 24ರಿಂದ ಜೂನ್​ 10ರ ವರೆಗೆ ಪರೀಕ್ಷೆ ನಡೆಯಲಿದೆ.

ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಆಕ್ಷೇಪಣೆಯನ್ನು ಸಲ್ಲಿಸಲಿಕ್ಕೂ ಅವಕಾಶ ನೀಡಲಾಗಿದೆ. 'ಈ ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ವಿದ್ಯಾರ್ಥಿಗಳು ಅಥವಾ ಅವರ ಪಾಲಕರು ಆಕ್ಷೇಪ ಹೊಂದಿದ್ದರೆ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷೆಗಳ ನಿರ್ದೇಶಕರಿಗೆ ಆಕ್ಷೇಪಣೆ ಸಲ್ಲಿಸಲು ಇನ್ನು ಒಂದು ವಾರದ ಕಾಲಾವಕಾಶ ಇರಲಿದೆ' ಎಂದು ಸಚಿವರು ತಿಳಿಸಿದ್ದಾರೆ.