ಬೆಂಗಳೂರು ಮುಂದಿನ ಶೈಕ್ಷಣಿಕ ವರ್ಷಕ್ಕೆ ರಾಜ್ಯದಲ್ಲಿ ಹೊಸದಾಗಿ 3 ವೈದ್ಯಕೀಯ ಕಾಲೇಜುಗಳು ಆರಂಭವಾಗುವ ಸಾಧ್ಯತೆಗಳಿವೆ. ಆರೋಗ್ಯ ವಿವಿ ವತಿಯಿಂದ ಕನಕಪುರ, ರಾಮನಗರ ಮತ್ತು ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸ್ಥಳೀಯ ವಿಚಾರಣಾ ಸಮಿತಿಯ (ಎಲ್‌ಐಸಿ) ವರದಿ ಆಧಾರದ ಮೇಲೆ ರಾಷ್ಟ್ರೀಯ ವೈದ್ಯಕೀಯ ಪರಿಷತ್ (ಎನ್‌ಎಂಸಿ) ಅರ್ಜಿ ಸಲ್ಲಿಸಲಾಗಿದೆ.
ರಾಮನಗರ ಮತ್ತು ಕನಕಪುರ ಸರ್ಕಾರಿ ಕಾಲೇಜುಗಳಾಗಿದ್ದು, ಬಾಗಲಕೋಟೆ ಖಾಸಗಿ ಕಾಲೇಜಾಗಿದೆ. ಎನ್‌ಎಂಸಿ ಅನುಮತಿ ನೀಡಿದರೆ ಮುಂದಿನ ಶೈಕ್ಷಣಿಕ ವರ್ಷ ಹೊಸ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಕುಲಪತಿ ಡಾ. ಎಂ.ಕೆ. ರಮೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.